ಮಡಿಕೇರಿ, ಏ. ೨೩: ೨೦೧೮ ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಹಾಕತ್ತೂರು ಬಳಿಯ ಬಿಳಿಗೇರಿಯಲ್ಲಿ ೨೨ ಮತ್ತು ಗಾಳಿಬೀಡು ಗ್ರಾಮದ ಬಳಿ ನಿರ್ಮಿಸಿರುವ ೧೪೦ ಒಟ್ಟು ೧೬೨ ಮಡಿಕೇರಿ, ಏ. ೨೩: ೨೦೧೮ ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಹಾಕತ್ತೂರು ಬಳಿಯ ಬಿಳಿಗೇರಿಯಲ್ಲಿ ೨೨ ಮತ್ತು ಗಾಳಿಬೀಡು ಗ್ರಾಮದ ಬಳಿ ನಿರ್ಮಿಸಿರುವ ೧೪೦ ಒಟ್ಟು ೧೬೨ ಕರ್ಣಂಗೇರಿಯಲ್ಲಿ ೩೫ ಮನೆಗಳು, ಮಾದಾಪುರದ ಜಂಬೂರಿನಲ್ಲಿ ೩೮೩, ಮದೆನಾಡು ಬಳಿ ೮೦ ಮನೆಗಳು ಸೇರಿದಂತೆ ಒಟ್ಟು ಮೂರು ಹಂತದಲ್ಲಿ ೬೬೦ ಮನೆಗಳನ್ನು ಸಂತ್ರಸ್ತರಿಗೆ ಹಸ್ತಾಂತರಿಸಲಾಗಿದೆ.

(ಮೊದಲ ಪುಟದಿಂದ) ಉಳಿದಂತೆ ಕೆ.ನಿಡುಗಡೆ ಗ್ರಾ.ಪಂ.ಯ ಆರ್‌ಟಿಒ ಕಚೇರಿ ಬಳಿ ೭೬ ಮನೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, ಎರಡು ತಿಂಗಳಲ್ಲಿ ಮನೆಗಳನ್ನು ಹಸ್ತಾಂತರಿಸಲಾಗುವುದು ಎಂದು ಹೇಳಿದರು.

ಪ್ರಕೃತಿ ವಿಕೋಪದಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಮನೆ ಹಸ್ತಾಂತರ ಮಾಡಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ನುಡಿದಂತೆ ನಡೆದಿದೆ. ಇಡೀ ರಾಜ್ಯದಲ್ಲಿಯೇ ಕೊಡಗು ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ಸಂತ್ರಸ್ತರಿಗೆ ೯.೮೫ ಲಕ್ಷ ರೂ. ವೆಚ್ಚದಲ್ಲಿ ರಾಜೀವ್ ಗಾಂಧಿ ವಸತಿ ನಿಗಮದಿಂದ ಮಾದರಿ ಮನೆಗಳನ್ನು ನಿರ್ಮಿಸಲಾಗಿದೆ ಎಂದರು.

ಶಾಸಕ ಕೆ.ಜಿ. ಬೋಪಯ್ಯ ಮಾತನಾಡಿ ಗಾಳಿಬೀಡು ವ್ಯಾಪ್ತಿಯಲ್ಲಿ ಹೆಚ್ಚು ಮಳೆಯಾಗುವುದರಿಂದ ಮನೆಯ ಸುತ್ತ ಅಗತ್ಯ ಹುಲ್ಲು ಬೆಳೆಸುವುದು ಮತ್ತಿತರ ಕಾಮಗಾರಿ ಕೈಗೊಳ್ಳುವಂತೆ ಸಲಹೆ ಮಾಡಿದರು.

ಶಾಸಕ ಎಂ.ಪಿ.ಅಪ್ಪಚ್ಚುರAಜನ್, ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ, ಪಶ್ಚಿಮ ಘಟ್ಟ ಕಾರ್ಯಪಡೆಯ ಅಧ್ಯಕ್ಷ ಶಾಂತೆಯAಡ ರವಿಕುಶಾಲಪ್ಪ, ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಜಿಲ್ಲಾಧಿಕಾರಿ ಚಾರುಲತ ಸೋಮಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ, ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರನ್, ಉಪ ವಿಭಾಗಾಧಿಕಾರಿ (ಪ್ರಭಾರ) ಪಿ. ಶ್ರೀನಿವಾಸ್, ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮದ ಯೋಜನಾ ನಿರ್ದೇಶಕ ಶ್ರೀನಿವಾಸ್, ತಹಶೀಲ್ದಾರ್ ಮಹೇಶ್ ಇತರರು ಇದ್ದರು.

ಕೊಡಗು ಜಿಲ್ಲೆಯಲ್ಲಿ ಪ್ರಕೃತಿ ವಿಕೋಪ ಸಂತ್ರಸ್ತರಿಗೆ ಮನೆ ನೀಡುವಲ್ಲಿ ಇನ್ನು ಮುಂದೆ ಮಹಿಳೆಯರ ಹೆಸರಿಗೆ ವಸತಿ ಕಲ್ಪಿಸಲಾಗುವುದು ಎಂದು ವಸತಿ ಸಚಿವ ಸೋಮಣ್ಣ ಅವರು ಪ್ರಕಟಿಸಿದ್ದಾರೆ.

ಜಿಲ್ಲೆಯಲ್ಲಿ ನಿರಾಶ್ರಿತರಿಗೆ ನಿರ್ಮಿಸಲಾದ ಮನೆಗಳನ್ನು ಹಸ್ತಾಂತರ ಮಾಡಲಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಶಯದಂತೆ ಪ್ರತಿಯೊಬ್ಬರಿಗೂ ಸೂರು ನೀಡುವ ಭರವಸೆ ಕೊಡಗಿನಲ್ಲಿ ಈಡೇರಿದಂತಾಗಿದೆ ಎಂದರು.