ಸೋಮವಾರಪೇಟೆ, ಏ. ೨೩: ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಪಕ್ಷದ ನಾಯಕಿ ಸುಜಾತ ಮೊಂಡಲ್ ಪರಿಶಿಷ್ಟ ಜಾತಿ ಸಮುದಾಯದ ಸದಸ್ಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದು, ಇವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಬಿಜೆಪಿ ಎಸ್.ಸಿ. ಮೋರ್ಚಾದ ವತಿಯಿಂದ ತಾಲೂಕು ತಹಶೀಲ್ದಾರ್ ಮೂಲಕ ರಾಷ್ಟçಪತಿಗಳಿಗೆ ಮನವಿ ಸಲ್ಲಿಸಲಾಯಿತು.

ತೃಣಮೂಲ ಕಾಂಗ್ರೆಸ್‌ನ ನಾಯಕಿ ಸುಜಾತ ಮೊಂಡಲ್ ಅವರು ಪರಿಶಿಷ್ಟ ಸಮುದಾಯವನ್ನು ಅವಮಾನಿಸುವ ಉದ್ದೇಶದಿಂದ ಅವಹೇಳನಕಾರಿ ಪದ ಬಳಸಿದ್ದಾರೆ. ಸಾಮಾಜಿಕ ಸಾಮರಸ್ಯ ಕದಡುವ ಪ್ರಯತ್ನ ನಡೆಸಲಾಗಿದೆ. ಈ ಬಗ್ಗೆ ರಾಜ್ಯ ಚುನಾವಣಾ ಆಯೋಗ ಹಾಗೂ ಪರಿಶಿಷ್ಟ ಜಾತಿಗೆ ಸಂಬAಧಿಸಿದ ರಾಷ್ಟಿçÃಯ ಆಯೋಗ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಈ ಬಗ್ಗೆ ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾ ಅಧ್ಯಕ್ಷ ಎಸ್.ಎ. ಪ್ರತಾಪ್, ತಾಲೂಕು ಅಧ್ಯಕ್ಷ ಹೆಚ್.ಸಿ. ರಾಮಕೃಷ್ಣ, ಕಾರ್ಯದರ್ಶಿ ದುಷ್ಯಂತ್‌ಕುಮಾರ್ ಅವರುಗಳು ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಿದ್ದಾರೆ