* ವೀರಾಜಪೇಟೆ, ಏ. ೨೩: ಕೋವಿಡ್-೧೯ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಜನಜಂಗುಳಿ ಉಂಟಾಗದAತೆ ತಡೆಗಟ್ಟುವ ನಿಟ್ಟಿನಲ್ಲಿ ತಾ. ೨೮ರ ಬುಧವಾರದಂದು ವೀರಾಜಪೇಟೆಯಲ್ಲಿ ನಡೆಯುವ ವಾರದ ಸಂತೆಯನ್ನು ರದ್ದುಪಡಿಸಲಾಗಿದೆ.
ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಸುಶ್ಮಿತಾ ಅವರ ಅಧ್ಯಕ್ಷತೆಯಲ್ಲಿ ನಡೆದ ತುರ್ತು ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದು ಸಂತೆ ಪರ ಊರಿನಿಂದಲೂ ಜನರು ಆಗಮಿಸುವುದರಿಂದ ಕೊರೊನಾ ಹರಡುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಪ.ಪಂ. ಮುಖ್ಯಾಧಿಕಾರಿ (ಪ್ರಬಾರ) ಹೇಮಕುಮಾರ್ ತಿಳಿಸಿದ್ದಾರೆ.