ನಾಪೋಕ್ಲು, ಏ. ೨೩: ಕೊರೊನಾ ಹಿನ್ನೆಲೆ ಎಲ್ಲಾ ನಾಗರಿಕರು ಸರಕಾರದ ಕಾನೂನನ್ನು ತಪ್ಪದೇ ಪಾಲಿಸುವಂತೆ ಮಡಿಕೇರಿ ತಾಲೂಕು ಗ್ರಾಮಾಂತರ ಪೊಲೀಸ್ ಠಾಣಾ ವೃತ್ತನಿರೀಕ್ಷಕ ದಿವಾಕರ್ ಸಲಹೆ ನೀಡಿದರು.
ಈ ಬಗ್ಗೆ ನಾಪೋಕ್ಲು ಪೊಲೀಸ್ ಠಾಣಾ ವತಿಯಿಂದ ಸ್ಥಳೀಯ ಬಸ್ ನಿಲ್ದಾಣದಲ್ಲಿ ಕೋವಿಡ್-೧೯ ವಿರುದ್ಧ ಜನಾಂದೋಲನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡಿದ ಅವರು ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಕಾನೂನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳ ಲಾಗುವದು ಎಂದು ಎಚ್ಚರಿಸಿದರು.
ಈ ಸಂದರ್ಭ ನಾಪೋಕ್ಲು ಠಾಣಾಧಿಕಾರಿ ಆರ್. ಕಿರಣ್, ಸಿಬ್ಬಂದಿ ಇದ್ದರು.