ಸೋಮವಾರಪೇಟೆ, ಏ. ೨೩: ಕರ್ನಾಟಕ ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಲಿಪಿಕ ನೌಕರರ ವಾಹನ ಚಾಲಕರು ಮತ್ತು ಗ್ರೂಪ್ ಡಿ. ನೌಕರರ ಸಂಘದ ಕೊರೊನಾ ವೈರಸ್ ಕುರಿತು ಪಟ್ಟಣದಲ್ಲಿ ಜಾಗೃತಿ ಜಾಥಾ ನಡೆಯಿತು. ಜಾಥಾಕ್ಕೆ ಶಾಸಕ ಅಪ್ಪಚ್ಚು ರಂಜನ್ ಚಾಲನೆ ನೀಡಿದರು. ನಂತರ ಮಾತನಾಡಿ, ಕೊರೊನಾ ಅಲೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು. ಆಸ್ಪತ್ರೆಗೆ ತೆರಳಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕೆಂದರು. ಈ ಸಂದರ್ಭ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಕೆ. ಪಾಂಡು, ಬೋಧಕೇತರ ನೌಕರರ ಸಂಘದ ಅಧ್ಯಕ್ಷ ಹೆಚ್.ಆರ್. ಸುರೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ಅಧ್ಯಕ್ಷ ಟಿ.ಕೆ. ಬಸವರಾಜು, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಪ್ರದೀಪ್, ಪ್ರೌಢಶಾಲಾ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರು ಪಾಲ್ಗೊಂಡಿದ್ದರು. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಜಾಗೃತಿ ಘೋಷಣೆ ಗಳೊಂದಿಗೆ ಜಾಥಾ ನಡೆಸಲಾಯಿತು.