ಮಡಿಕೇರಿ, ಏ. ೨೩: ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವಾರಾಂತ್ಯ ಕರ್ಫ್ಯೂ ಅನ್ನು ಜಾರಿಗೊಳಿಸಿದ್ದು, ಕರ್ಫ್ಯೂ ಸಮಯದಲ್ಲಿ ತುರ್ತು ಸೇವೆಗಳು ಹೊರತುಪಡಿಸಿ ಯಾವುದೇ ಸಾರ್ವಜನಿಕರ ಓಡಾಟವನ್ನು ನಿರ್ಬಂಧಿಸಲಾಗಿದೆ. ಉಲ್ಲೇಖ (೨)ರ ರಾಜ್ಯ ಚುನಾವಣಾ ಆಯೋಗದ ಆದೇಶದಂತೆ ಅಭ್ಯರ್ಥಿಯೂ ಸೇರಿ ಗರಿಷ್ಠ ೫ ಮಂದಿ ಬೆಂಬಲಿಗರೊAದಿಗೆ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಮನೆ ಮನೆಗೆ ಭೇಟಿ ನೀಡಿ ಪ್ರಚಾರ ನಡೆಸುವಂತೆ ಸೂಚನೆಗಳನ್ನು ನೀಡಲಾಗಿದೆ.
ಮಡಿಕೇರಿ ನಗರಸಭೆ ಸಾರ್ವತ್ರಿಕ ಚುನಾವಣೆ-೨೦೨೧ರ ಚುನಾವಣೆಯು ತಾ. ೨೭ರಂದು ಜರುಗಲಿದ್ದು, ಅಭ್ಯರ್ಥಿಗಳು ಮತ್ತು ರಾಜಕೀಯ ಪಕ್ಷ ಮುಖಂಡರುಗಳು ವಾರಾಂತ್ಯ ಕರ್ಫ್ಯೂ ಜಾರಿ
(ಮೊದಲ ಪುಟದಿಂದ) ಸಮಯದಲ್ಲಿ ಯಾವುದೇ ಮನೆ ಮನೆಗೆ ತೆರಳಿ ಪ್ರಚಾರ ಮಾಡಲು ಅವಕಾಶ ಇರುವುದಿಲ್ಲ. ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಾರಾಂತ್ಯ ಕರ್ಫ್ಯೂ ಅನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸ ಬೇಕಾಗಿರುತ್ತದೆ. ಕರ್ಫ್ಯೂ ಸಮಯದಲ್ಲಿ ಕೇವಲ ತುರ್ತು ಸೇವಾ ವಾಹನಗಳು ಹೊರತುಪಡಿಸಿ ಅನಗತ್ಯ ವಾಹನಗಳು ಓಡಾಡುವುದನ್ನು, ಸಾರ್ವಜನಿಕರು ಓಡಾಡುವುದನ್ನು, ಅಂಗಡಿ, ಹೊಟೇಲ್, ಬಾರ್ ಮತ್ತು ಇತರೆ ಎಲ್ಲಾ ತರಹದ ಅಂಗಡಿಗಳನ್ನು ಮುಚ್ಚುವುದು ಕಡ್ಡಾಯವಾಗಿರುತ್ತದೆ. ಕರ್ಫ್ಯೂ ಸಮಯದಲ್ಲಿ ಅವಶ್ಯಕ ಸಂದರ್ಭಗಳನ್ನು ಹೊರತುಪಡಿಸಿ ಯಾವುದೇ ಅನಾವಶ್ಯಕ ಓಡಾಟ ಮಾಡಲು ಅವಕಾಶ ಇರುವುದಿಲ್ಲ. ಈ ಸಂದರ್ಭದಲ್ಲಿ ನಗರಸಭೆ ಚುನಾವಣೆಗೆ ಸಂಬAಧಿಸಿದAತೆ ಯಾವುದೇ ಅಭ್ಯರ್ಥಿ, ಕಾರ್ಯಕರ್ತರು, ರಾಜಕೀಯ ಪ್ರತಿನಿಧಿಗಳು, ಮುಖಂಡರುಗಳು ಚುನಾವಣಾ ಪ್ರಚಾರಕ್ಕೆ ಕರ್ಫ್ಯೂ ನಿಯಮಗಳನ್ನು ಉಲ್ಲಂಘಿಸಿ ಓಡಾಡುವುದನ್ನು ನಿಷೇಧಿಸಲಾಗಿದ್ದು, ಇದರ ಹೊರತಾಗಿಯೂ ಚುನಾವಣಾ ಪ್ರಚಾರಕ್ಕಾಗಿ ಓಡಾಡುವುದು ವಿಪತ್ತು ನಿರ್ವಹಣಾ ಕಾಯ್ದೆ ೨೦೦೫ರ ಕಲಂ ೫೧ ರಿಂದ ೬೦ ರವರೆಗೆ ಹಾಗೂ ಸಿಆರ್‌ಪಿಸಿ ಸೆಕ್ಷನ್ ೧೪೪ ಸ್ಪಷ್ಟ ಉಲ್ಲಂಘನೆ ಆಗಲಿದೆ. ಕರ್ಫ್ಯೂ ಅನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸ ಬೇಕಾಗಿರುವ ಹಿನ್ನೆಲೆಯಲ್ಲಿ ವಾರಾಂತ್ಯ ಕರ್ಫ್ಯೂ ಸಮಯದಲ್ಲಿ ಯಾವುದೇ ಅಭ್ಯರ್ಥಿ ಕಾರ್ಯಕರ್ತರು, ರಾಜಕೀಯ ಪ್ರತಿನಿಧಿಗಳು, ಮುಖಂಡರುಗಳು ಚುನಾವಣಾ ಪ್ರಚಾರ ಮಾಡಲು ಅವಕಾಶ ಇರುವುದಿಲ್ಲವೆಂದು ಈ ಮೂಲಕ ಆದೇಶಿಸಿದೆ.
ಒಂದು ವೇಳೆ ಯಾವುದೇ ಅಭ್ಯರ್ಥಿ, ರಾಜಕೀಯ ಪಕ್ಷದ ಮುಖಂಡರುಗಳು ಈ ನಿಯಮಗಳನ್ನು ಉಲ್ಲಂಘಿಸಿದಲ್ಲಿ ಅಂತಹ ಅಭ್ಯರ್ಥಿ, ಕಾರ್ಯಕರ್ತರು, ರಾಜಕೀಯ ಪ್ರತಿನಿಧಿಗಳು, ಮುಖಂಡರುಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ೨೦೦೫ ಕಲಂ ೫೧ ರಿಂದ ೬೦ರ ಅನ್ವಯವಾಗುವ ಹಾಗೂ ಐ.ಪಿ.ಸಿ. ಸೆಕ್ಷನ್ ೧೮೮ರಂತೆ ಹಾಗೂ ಕರ್ನಾಟಕ ಸಾಂಕ್ರಮಿಕ ರೋಗಗಳ ಕಾಯ್ದೆ ೨೦೨೦ರ ಕಲಂ (೪), (೫) ಮತ್ತು (೧೦)ರಂತೆ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಚಾರುಲತಾ ಸೋಮಲ್ ಆದೇಶ ಹೊರಡಿಸಿದ್ದಾರೆ.