ನಾಪೋಕ್ಲು, ಏ. ೨೩: ಸಮೀಪದ ನೆಲಜಿ ಗ್ರಾಮದ ಸರ್ಕಾರಿ ಮತ್ತು ಸರ್ಕಾರೇತರ ಉದ್ಯೋಗಿಗಳ ಮತ್ತು ಪಿಂಚಣಿದಾರರ ಸಂಘದ ವಾರ್ಷಿಕ ಮಹಾಸಭೆಯನ್ನು ತಾ. ೨೫ ರಂದು ಸಂಘದ ಕಟ್ಟಡದಲ್ಲಿ ನಡೆಸಲು ತೀರ್ಮಾನಿಸಲಾಗಿತ್ತು.
ಕೋವಿಡ್ ಸಾಂಕ್ರಾಮಿಕ ರೋಗ ಹೆಚ್ಚುತ್ತಿರುವ ಹಿನ್ನೆಲೆ ಹಾಗೂ ಸರ್ಕಾರದ ಕಟ್ಟುನಿಟ್ಟಿನ ಆದೇಶ ದಿಂದಾಗಿ ಸಭೆಯನ್ನು ಅನಿರ್ಧಿ ಷ್ಟಾವಧಿಗೆ ಮುಂದೂಡಲಾಗಿದೆ ಎಂದು ಸಂಘದ ಆಡಳಿತ ಮಂಡಳಿ ಪ್ರಕಟಣೆ ತಿಳಿಸಿದೆ.