ಮಡಿಕೇರಿ, ಏ. ೨೪: ಗಾಳಿಬೀಡು ಗ್ರಾಮದ ಜವಾಹರ್ ನವೋದಯ ವಿದ್ಯಾಲಯದಲ್ಲಿ ತೆರೆಯಲಾಗಿರುವ ಕೋವಿಡ್ ಕೇರ್ ಸೆಂಟರ್ಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಭೇಟಿ ನೀಡಿ ವ್ಯವಸ್ಥೆಗಳ ಪರಿಶೀಲನೆ ನಡೆಸಿ ಸೂಕ್ತ ನಿರ್ದೇಶನ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಆರೋಗ್ಯ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು, ತಹಶೀಲ್ದಾರರು ಹಾಜರಿದ್ದರು