ಮಡಿಕೇರಿ, ಏ. ೨೪: ಕೋವಿಡ್ ಹೆಚ್ಚಳ ಹಿನ್ನೆಲೆ ಮಡಿಕೇರಿ ನಗರಸಭೆ ವತಿಯಿಂದ ಮಡಿಕೇರಿ ನಗರದ ಮುಖ್ಯ ರಸ್ತೆ ಸೇರಿದಂತೆ ಹಲವು ಕಡೆಗಳಲ್ಲಿ ಶನಿವಾರ ಸ್ಯಾನಿಟೈಸ್ ಮಾಡುವ ಕಾರ್ಯ ನಡೆಯಿತು. ಅಗ್ನಿಶಾಮಕ ವಾಹನದ ಮೂಲಕ ಮುಖ್ಯ ರಸ್ತೆಯಲ್ಲಿ ಸ್ಯಾನಿಟೈಸ್ ಕಾರ್ಯ ನಡೆಯಿತು ಎಂದು ಪೌರಾಯಕ್ತರಾದ ಎಸ್.ವಿ. ರಾಮದಾಸ್ ತಿಳಿಸಿದ್ದಾರೆ.