ಮಡಿಕೇರಿ, ಏ. ೨೪: ಪಬ್ಲಿಕ್ ಟಿವಿ, ರೋಟರಿ ಸಂಸ್ಥೆ ಹಾಗೂ ಆರ್.ಬಿ.ಐ ಸಹಯೋಗದೊಂದಿಗೆ, ಜ್ಞಾನ ದೀವಿಗೆ ಕಾರ್ಯಕ್ರಮದಡಿಯಲ್ಲಿ ಜಿಲ್ಲೆಯ ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಉಚಿತ ಟ್ಯಾಬ್‌ಗಳನ್ನು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿತರಣೆ ಮಾಡಲಾಯಿತು.

ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗೆ ತೆರಳಲು ಆಗದಿರುವುದರಿಂದ ಹಾಗೂ ಗ್ರಾಮಾಂತರ ಮಕ್ಕಳಿಗೆ ಆನ್‌ಲೈನ್ ತರಗತಿಗಳನ್ನು ಪಡೆದುಕೊಳ್ಳಲು ಕಷ್ಟಕರವಾಗಿರುವುದರಿಂದ ಟ್ಯಾಬ್ ವ್ಯವಸ್ಥೆಯನ್ನು ಪಬ್ಲಿಕ್ ಟಿವಿ ಹಾಗೂ ರೋಟರಿ ಸಂಸ್ಥೆ ಆರ್.ಬಿ.ಐ. ಅವರ ಸಹಯೋಗದಿಂದ ೨೨ ಪ್ರೌಢಶಾಲೆಯ ಒಟ್ಟು ೪೭೧ ಮಕ್ಕಳಿಗೆ ಟ್ಯಾಬ್‌ಗಳನ್ನು ವಿತರಿಸಲಾಯಿತು.

ಲೋಕಸಭಾ ಸಂಸದ ಪ್ರತಾಪ್ ಸಿಂಹ ಅವರು ಮಾತನಾಡಿ, ಟ್ಯಾಬ್‌ನಲ್ಲಿ ತರಗತಿಯಲ್ಲಿ ಬರುವಂತೆ ಸಂಪೂರ್ಣವಾದ ಪಠ್ಯಕ್ರಮವನ್ನು ಇಂಗ್ಲಿಷ್ ಹಾಗೂ ಕನ್ನಡದಲ್ಲಿ ಪಡೆದುಕೊಳ್ಳಬಹುದಾಗಿದೆ. ಹತ್ತನೇ ತರಗತಿ ಮಕ್ಕಳಿಗೆ ಬಹಳಷ್ಟು ಉಪಯುಕ್ತವಾಗಿರುತ್ತದೆ ಎಂದು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಮಾತನಾಡಿ, ಮಕ್ಕಳ ಭವಿಷ್ಯದ ಚಿಂತನೆಯನ್ನು ಮಾಡಿ ಟ್ಯಾಬ್ ವ್ಯವಸ್ಥೆಯನ್ನು ಮಾಡಿರುವುದು ಸಂತೋಷದ ವಿಷಯ ಎಂದು ಮೆಚ್ಚುಗೆ ವ್ಯಕ್ತ ಪಡಿಸಿದರು.

ವಿತರಣಾ ಕಾರ್ಯಕ್ರಮದಲ್ಲಿ ಆರ್.ಬಿ.ಐ.ನ ಅನಂತ್ ಹೆಗ್ಡೆ, ಲಕ್ಷಿö್ಮÃಶ್ ಬಾಬು, ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಶಾಸಕರಾದ ಕೆ.ಜಿ ಬೋಪಯ್ಯ, ಎಂ.ಪಿ. ಅಪ್ಪಚ್ಚು ರಂಜನ್, ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಪಶ್ಚಿಮ ಘಟ್ಟ ಕಾರ್ಯಪಡೆಯ ಅಧ್ಯಕ್ಷ ಶಾಂತೆಯAಡ ರವಿಕುಶಾಲಪ್ಪ, ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಜಿಲ್ಲಾಧಿಕಾರಿ ಚಾರುಲತ ಸೋಮಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಮತ್ತಿತರರು ಉಪಸ್ಥಿತರಿದ್ದರು.