ಸುಂಟಿಕೊಪ್ಪ, ಏ. ೨೪: ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ತಾ. ೨೫ ರಂದು (ಇಂದು)ನಡೆಯಬೇಕಿದ್ದ ಸುಂಟಿಕೊಪ್ಪ ಸಂತೆಯನ್ನು ರದ್ದುಗೊಳಿಸಲಾಗಿದೆ
ಕೊರೊನಾ ವೈರಸ್ ಹರಡುವು ದನ್ನು ತಡೆಗಟ್ಟುವ ಉದ್ದೇಶದಿಂದ ಈ ಕ್ರಮಕೈಗೊಳ್ಳಲಾಗಿದ್ದು, ಸಂತೆ ವ್ಯಾಪಾರಸ್ಥರು ಹಾಗೂ ಗ್ರಾಹಕರು ಸಹಕರಿಸಬೇಕೆಂದು ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೇಣುಗೋಪಾಲ್ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.