ಕಡಂಗ, ಏ. ೨೪: ಕಡಂಗ ವಿಜಯ ವಿದ್ಯಾಸಂಸ್ಥೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ೧೩೦ನೇ ಜನ್ಮ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.
ಶಾಲಾ ಮುಖ್ಯೋಪಾಧ್ಯಾಯ ಸೋಮಶೇಖರ್ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು. ನಂತರ ಮಾತನಾಡಿದ ಅವರು, ಅಂಬೇಡ್ಕರ್ ಅವರು ಕೇವಲ ಭಾರತಕ್ಕೆ ಮಾತ್ರವಲ್ಲದೆ ಇಡೀ ವಿಶ್ವದ ಮಹಾನಾಯಕರಾಗಿದ್ದರು. ಸಾಮಾಜಿಕ ಸಮಾನತೆಗಾಗಿ ಹೋರಾಟ ರೂಪಿಸಿದರು ಎಂದರು. ಕಾರ್ಯಕ್ರಮದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಾಲಾ ಶಿಕ್ಷಕರು ಹಾಜರಿದ್ದರು.