ಮಡಿಕೇರಿ, ಏ. ೨೪: ತಾ. ೨೭ ರಂದು ನಡೆಯಲಿರುವ ಸ್ಥಳೀಯ ಸಂಸ್ಥೆ ಚುನಾವಣೆಗೆ ಸಂಬAಧಿಸಿದAತೆ ಚುನಾವಣೆ ನಡೆಯಲಿರುವ ಕ್ಷೇತ್ರವ್ಯಾಪ್ತಿಯಲ್ಲಿ ವೇತನ ಸಹಿತ ರಜೆ ಘೋಷಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಕೊಡಗಿನಲ್ಲಿ ಮಡಿಕೇರಿ ನಗರಸಭೆಗೆ ಚುನಾವಣೆ ನಿಗದಿಯಾಗಿದ್ದು, ಈ ಕ್ಷೇತ್ರದಲ್ಲಿ ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ರಜೆ ಇರುತ್ತದೆ.