ಕೂಡಿಗೆ, ಏ. ೨೫: ಕೂಡುಮಂಗಳೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಡುಮಂಗಳೂರು ಗ್ರಾಮದ ೪ನೇ ವಾರ್ಡ್ನಲ್ಲಿ ಹೆಚ್ಚು ಜನ ಜ್ವರದಿಂದ ಬಳಲುತ್ತಿದ್ದು, ಡೆಂಗ್ಯು ಭಯ ಆವರಿಸಿದೆ. ವಾರ್ಡ್ನ ಚರಂಡಿಗಳು ತ್ಯಾಜ್ಯದಿಂದ ತುಂಬಿ ಸೊಳ್ಳೆಗಳ ಆವಾಸ ಸ್ಥಾನವಾಗಿದೆ. ಅಲ್ಲದೆ ಹಲವು ಮಂದಿಗೆ ಅನಾರೋಗ್ಯ ಕಾಣಿಸಿಕೊಂಡು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಗ್ರಾಮ ಪಂಚಾಯಿತಿ ಈ ಬಗ್ಗೆ ಗಮನಹರಿಸಿ ಸ್ವಚ್ಛತೆಗೆ ಕ್ರಮಕೈಗೊಳ್ಳಬೇಕು. ಅಶುಚಿತ್ವದಿಂದ ಈ ಭಾಗದಲ್ಲಿ ಡೆಂಗ್ಯು ಹರಡುವ ಭೀತಿ ಜನರಲ್ಲಿ ಕಾಡುತ್ತಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯೆ ನೀಡಿದ ಗ್ರಾ.ಪಂ. ಅಧ್ಯಕ್ಷೆ ಇಂದಿರಾ ಮತ್ತು ಅಭಿವೃದ್ಧಿ ಅಧಿಕಾರಿ ಸಂತೋಷ್, ಗ್ರಾಮದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದೇವೆ. ಕೂಡಲೆ ಚರಂಡಿ ಸ್ವಚ್ಛತೆ ಕಾರ್ಯ ಕೈಗೊಳ್ಳಲಾಗು ವುದು ಎಂದು ಭರವಸೆ ನೀಡಿದ್ದಾರೆ.