ಕೂಡಿಗೆ, ಏ. ೨೫: ಕೂಡಿಗೆಯ ಸರ್ಕಲ್ ಸಮೀಪ ಹಾರಂಗಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆಯ ಮೇಲೆ ಮಳೆಯಿಂದಾಗಿ ಸೇತುವೆಯ ಮೇಲೆ ಮರಳು ಮತ್ತು ನೀರು ನಿಂತು ಸಾರ್ವಜನಿಕರಿಗೆ ತೊಂದರೆಗಳು ಆಗುತ್ತಿತು.
ಇದರ ಬಗ್ಗೆ ಸಾರ್ವಜನಿಕರು ಗ್ರಾಮ ಪಂಚಾಯತಿ ಮಾಹಿತಿಯನ್ನು ನೀಡಿದ ಮೇರೆಗೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಅಯಿಷಾ ಸ್ಥಳ ಪರಿಶೀಲನೆ ನಡೆಸಿ ತುರ್ತಾಗಿ ಸೇತುವೆ ಮೇಲಿನ ಮರಳು ಮತ್ತು ಮಣ್ಣುನ್ನು ತೆಗೆಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಮಾಡಿದರು. ಇದರಿಂದಾಗಿ ನೀರು ಸರಾಗವಾಗಿ ಹರಿದು ಸಮಸ್ಯೆ ಪರಿಹಾರವಾಯಿತು.