ಕೂಡಿಗೆ, ಏ. ೨೬: ಕುಶಾಲನಗರ ತಾಲೂಕು ವ್ಯಾಪ್ತಿಯ ಪಡಿತರ ಪೂರೈಸುವ ನ್ಯಾಯ ಬೆಲೆ ಅಂಗಡಿಗಳಿಗೆ ತಾಲೂಕು ತಹಶೀಲ್ದಾರ್ ಗೋವಿಂದರಾಜ್ ಭೇಟಿ ನೀಡಿ ಕೊರೊನಾ ಹಿನ್ನೆಲೆಯ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸಿಬ್ಬಂದಿಗಳಿಗೆ ಸೂಚನೆ ನೀಡಿದರು. ಭೇಟಿ ನೀಡಿದ ಕೇಂದ್ರಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಂಡು ಪಡಿತರ ವಸ್ತುಗಳನ್ನು ಪಡೆದುಕೊಂಡು ಹೋಗುವಂತೆ ಗ್ರಾಮಸ್ಥರಿಗೆ ತಿಳಿಸಿದರು.