ಮಡಿಕೇರಿ, ಏ. ೨೬: ರಾಜ್ಯದಲ್ಲಿ ಪ್ರಸ್ತುತ ಕೋವಿಡ್-೧೯ರ ಪ್ರಕರಣಗಳು ತೀವ್ರಗತಿಯಲ್ಲಿ ಹೆಚ್ಚಾಗುತ್ತಿದ್ದು, ಈಗಾಗಲೇ ರಾಜ್ಯಾದ್ಯಂತ ೧೪೪ ಸೆಕ್ಷನ್ ಜಾರಿಯಾಗಿದೆ. ರಾತ್ರಿ ವೇಳೆ ಮತ್ತು ವಾರಾಂತ್ಯದಲ್ಲಿ ಲಾಕ್‌ಡೌನ್ ಜಾರಿಯಲ್ಲಿದ್ದು, ಪರಿಸ್ಥಿತಿ ತುಂಬಾ ಗಂಭೀರವಾಗಿರುವುದರಿAದ ಮತದಾರರ ಮತ್ತು ಚುನಾವಣಾ ಸಿಬ್ಬಂದಿಗಳ ಆರೋಗ್ಯದ ಹಿತದೃಷ್ಟಿಯಿಂದ ಈ ಹಂತದಲ್ಲಿ ಚುನಾವಣೆ ನಡೆಸುವುದು ಸೂಕ್ತವಲ್ಲ ವೆಂದು ಸರಕಾರವು ಮನಗಂಡು, ಕೋವಿಡ್-೧೯ ಸಾಂಕ್ರಾಮಿಕ ರೋಗ ಕಡಿಮೆಯಾಗು ವವರೆಗೂ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಯನ್ನು ಮುಂದೂಡಲು ತೀರ್ಮಾನಿಸಿದೆ.

ಈ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣಾ ಪ್ರಕ್ರಿಯೆಯನ್ನು ಪ್ರಸ್ತುತ ಯಾವ ಹಂತದಲ್ಲಿ ಇರುತ್ತದೆಯೋ ಅಲ್ಲಿಂದ ಮುಂದಿನ ಆದೇಶದವರೆಗೆ ಮುಂದೂಡಿ, ಮುಂದೆ ಇದೇ ಚುನಾವಣೆ ಪ್ರಕ್ರಿಯೆಯನ್ನು ಮುಂದೂಡಿದ ಹಂತದಿAದ ಯಥಾವತ್ತಾಗಿ ಮುಂದುವರೆಸಲು ಕ್ರಮಕೈ ಗೊಳ್ಳುವಂತೆ ಸಹಕಾರ ಇಲಾಖೆ ಜಂಟಿ ಕಾರ್ಯದರ್ಶಿ ಎಂ. ವೆಂಕಟ ಸ್ವಾಮಿ ಆದೇಶ ಹೊರಡಿಸಿದ್ದಾರೆ.