ಮಡಿಕೇರಿ, ಏ. ೨೬: ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, ೧೯೯೩ರ ಪ್ರಕರಣ ೧೫೯ ಮತ್ತು ೧೬೦ರಡಿ ೨೦೧೬-೨೦೨೧ ಅವಧಿಗೆ ರಚನೆಯಾಗಿದ್ದ ರಾಜ್ಯದ ಜಿಲ್ಲಾ ಪಂಚಾಯಿತಿಗಳ ಆಡಳಿತ ಅವಧಿಯು ೨೦೨೧ರ ಮೇ ತಿಂಗಳ ವಿವಿಧ ದಿನಾಂಕಗಳAದು ಮುಕ್ತಾಯ ಗೊಳ್ಳಲಿದೆ. ೨೦೨೧-೨೦೨೬ರ ಅವಧಿಗೆ ರಾಜ್ಯದ ಜಿಲ್ಲಾ ಪಂಚಾಯಿತಿಗಳನ್ನು ರಚಿಸುವ ಸಂಬAಧವಾಗಿ ಚುನಾವಣೆ ಯನ್ನು ನಡೆಸಲು ರಾಜ್ಯ ಚುನಾವಣಾ ಆಯೋಗ ಪ್ರಕ್ರಿಯೆಯನ್ನು ಪ್ರಾರಂಭಿಸಿರುತ್ತದೆ.

ಈ ಪ್ರಕ್ರಿಯೆ ಪೂರ್ಣಗೊಳ್ಳಲು ಕಾಲಾವಕಾಶ ಬೇಕಾಗಿರುತ್ತದೆ. ಹಾಗಾಗಿ ೨೦೨೧ ಮೇ - ಜೂನ್ ತಿಂಗಳಿನಲ್ಲಿ ಅವಧಿ ಮುಕ್ತಾಯ ಗೊಳ್ಳಲಿರುವ ಜಿಲ್ಲಾ ಪಂಚಾಯಿತಿ ಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸುವ ಅವಶ್ಯಕತೆ ಇದ್ದು, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, ೧೯೯೩ರ

(ಮೊದಲ ಪುಟದಿಂದ) ಪ್ರಕರಣದ ೩೨೧ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಅವಧಿ ಮುಕ್ತಾಯವಾಗುವ ಮರು ದಿನದ ದಿನಾಂಕದಿAದ ಜಾರಿಗೆ ಬರುವಂತೆ ಜಿಲ್ಲಾ ಪಂಚಾಯಿತಿಗಳಿಗೆ ಸಂಬAಧಪಟ್ಟ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ಆಡಳಿತಾಧಿಕಾರಿಗಳನ್ನಾಗಿ ನೇಮಿಸಿ ಸರಕಾರ ಆದೇಶ ಹೊರಡಿಸಿದೆ. ಅಂತೆಯೇ ಕೊಡಗು ಜಿಲ್ಲಾ ಪಂಚಾಯಿತಿಗೆ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅನ್ಬುಕುಮಾರ್ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.