ರಾಜ್ಯದಲ್ಲಿ ಕೊರೊನಾ ಸ್ಫೋಟ: ಇಂದು ೧೮೦ ಮಂದಿ ಬಲಿ
ಬೆಂಗಳೂರು, ಏ. ೨೭: ರಾಜ್ಯದಲ್ಲಿ ಕೊರೊನಾ ಆರ್ಭಟ ಮುಂದುವರೆದಿದ್ದು, ಇಂದು ೩೧,೮೩೦ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ ೧೪,೦೦,೭೭೫ಕ್ಕೆ ಏರಿಕೆಯಾಗಿದೆ. ಕಳೆದ ೨೪ ಗಂಟೆಯಲ್ಲಿ ರಾಜ್ಯದಲ್ಲಿ ಮರಣ ಮೃದಂಗ ಮುಂದುವರೆದಿದ್ದು, ಮಹಾಮಾರಿಗೆ ಮಂಗಳವಾರ ಒಂದೇ ದಿನ ಬರೋಬ್ಬರಿ ೧೮೦ ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ ೧೪,೮೦೭ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಗಳೂರಿನಲ್ಲಿ ಇಂದು ೧೭,೫೫೦ ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ ೬,೮೭,೭೫೧ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಸೋಂಕಿಗೆ ೯೭ ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಇಂದು ೧೦,೭೯೩ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿAದ ಚೇತರಿಸಿಕೊಂಡವರ ಸಂಖ್ಯೆ ೧೦,೮೪,೦೫೦ಕ್ಕೆ ಏರಿಕೆಯಾಗಿದೆ. ೩,೦೧,೮೯೯ ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ ೨,೦೬೩ ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮತ ಎಣಿಕೆ ನಂತರ ವಿಜಯೋತ್ಸವ ನಡೆಸುವಂತಿಲ್ಲ
ನವದೆಹಲಿ, ಏ. ೨೭: ವಿಧಾನಸಭಾ ಚುನಾವಣೆ, ವಿವಿಧ ಲೋಕಸಭೆ ಉಪಚುನಾವಣೆ ನಡೆದ ರಾಜ್ಯಗಳಲ್ಲಿ ಮತ ಎಣಿಕೆ ದಿನದಂದು ಮತ ಎಣಿಕೆಗೆ ಮೊದಲು ಅಥವಾ ನಂತರ ಎಲ್ಲಾ ಬಗೆಯ ವಿಜಯೋತ್ಸವಗಳನ್ನು ನಿಷೇಧಿಸಿ ಚುನಾವಣಾ ಆಯೋಗ ಮಂಗಳವಾರ ಆದೇಶಿಸಿದೆ. ಕೊರೊನಾ ವೈರಸ್ ಹರಡುವಿಕೆ ತಪ್ಪಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಮೇ ೨ ರಂದು ಕರ್ನಾಟಕದ ಬೆಳಗಾವಿ ಲೋಕಸಭೆ, ಮಸ್ಕಿ, ಬಸವಕಲ್ಯಾಣ ವಿಧಾನಸಭೆ ಉಪಚುನಾವಣೆ ಸೇರಿದಂತೆ ಅಸ್ಸಾಂ, ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ ಮತ್ತು ಪುದುಚೇರಿಯ ವಿಧಾನಸಭೆ ಚುನಾವಣಾ ಫಲಿತಾಂಶ ಹೊರಬೀಳಲಿದೆ. ಈ ನಿಟ್ಟಿನಲ್ಲಿ ಆದೇಶ ಹೊರಡಿಸಲಾಗಿದೆ ಎಂದು ಆಯೋಗದ ಮೂಲಗಳು ತಿಳಿಸಿವೆ.
ಸ್ವದೇಶಕ್ಕೆ ಮರಳಲು ವಿದೇಶಿ ಆಟಗಾರರಿಗೆ ವ್ಯವಸ್ಥೆ
ನವದೆಹಲಿ, ಏ. ೨೭: ಕೊರೊನಾ ಎರಡನೇ ಅಲೆ ಹಿನ್ನೆಲೆ ಭಾರತದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೆ ಇದೆ. ಇದರ ನಡುವೆ ಐಪಿಎಲ್ ಟೂರ್ನಿ ಸಹ ನಡೆಯುತ್ತಿದೆ. ಹೀಗಾಗಿ ಐಪಿಎಲ್ನಲ್ಲಿ ಭಾಗಿಯಾಗಿರುವ ವಿದೇಶಿ ಆಟಗಾರರಿಗೆ ಬಿಸಿಸಿಐ ಸುರಕ್ಷಿತವಾಗಿ ಸ್ವದೇಶಕ್ಕೆ ಕಳುಹಿಸುವ ಭರವಸೆ ನೀಡಿದೆ. ಅದಾಗಲೇ ಮೂವರು ವಿದೇಶಿ ಕ್ರಿಕೆಟಿಗರು ಐಪಿಎಲ್ಗೆ ಗುಡ್ ಬೈ ಹೇಳಿ ಸರಣಿಯನ್ನು ಅರ್ಧಕ್ಕೆ ಮೊಟಕುಗೊಳಿಸಿ ಸ್ವದೇಶಕ್ಕೆ ವಾಪಸಾಗಿದ್ದಾರೆ. ಈ ಹಿನ್ನೆಲೆ ಬಿಸಿಸಿಐ ವಿದೇಶಿ ಆಟಗಾರರಿಗೆ ಸ್ಥೆöÊರ್ಯ ತುಂಬಿದೆ. ಐಪಿಎಲ್ ಟೂರ್ನಿ ಮುಕ್ತಾಯದ ಬಳಿಕ ತಮ್ಮ ತಮ್ಮ ದೇಶಕ್ಕೆ ಮರಳಲು ಆಟಗಾರರಿಗೆ ಏನೇನು ಸೌಲಭ್ಯ ನೀಡಬೇಕೋ ಅದೆಲ್ಲವನ್ನೂ ನಾವು ಒದಗಿಸುತ್ತೇವೆ. ಸ್ವದೇಶಕ್ಕೆ ಮರಳಲು ಬೇಕಾದ ವ್ಯವಸ್ಥೆ ಎಲ್ಲವನ್ನೂ ಮಾಡಿಕೊಡುತ್ತೇವೆ ಎಂದು ಬಿಸಿಸಿಐ ತಿಳಿಸಿದೆ. ಕೊರೊನಾ ಹೆಚ್ಚಳ ಹಿನ್ನೆಲೆ ಬಹುತೇಕ ಕ್ರಿಕೆಟಿಗರು ಟೂರ್ನಿಯ ಮುಕ್ತಾಯದ ಬಳಿಕ ಮನೆಗೆ ಮರಳುವುದು ಹೇಗೆ ಎಂದು ಚಿಂತೆಗೀಡಾಗಿದ್ದೀರಿ ಎಂದು ತಿಳಿದಿದೆ. ಆದರೆ ಈ ಬಗ್ಗೆ ನೀವು ಆತಂಕ ಪಡುವ ಅಗತ್ಯವಿಲ್ಲ. ಸದ್ಯದ ಪರಿಸ್ಥಿತಿಯ ಬಗ್ಗೆ ಬಿಸಿಸಿಐ ಕೂಡ ಗಮನವಿರಿಸಿದೆ. ನೀವು ಸ್ವದೇಶಕ್ಕೆ ಮರಳಲು ಅಗತ್ಯ ವ್ಯವಸ್ಥೆಯನ್ನು ಸರ್ಕಾರದೊಂದಿಗೆ ವಿಚಾರ ಮಾಡಿದೆ ಎಂದು ಬಿಸಿಸಿಐ ಹೇಳಿದೆ.
ಮನೆಯಲ್ಲಿಯೂ ಮಾಸ್ಕ್ ಧರಿಸಬೇಕೆ?
ನವದೆಹಲಿ, ಏ. ೨೭: ಭಾರತದಲ್ಲಿ ಕೊರೊನಾ ವೈರಸ್ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಜನ ತಮ್ಮ ಮನೆಗಳಲ್ಲೂ ಮಾಸ್ಕ್ ಧರಿಸಲು ಆರಂಭಿಸಬೇಕು ಎಂದು ಕೇಂದ್ರ ಸರ್ಕಾರ ಸೋಮವಾರ ಹೇಳಿದೆ. ಆದರೆ ಇದನ್ನು ಅನುಸರಿಸಬೇಕಾದರೆ ಕೆಲವು ಸ್ಪಷ್ಟ ಸನ್ನಿವೇಶ ಇರಬೇಕು ಎಂದು ವೈದ್ಯರು ಮತ್ತು ತಜ್ಞರು ಹೇಳುತ್ತಿದ್ದಾರೆ. ಕುಟುಂಬದಲ್ಲಿ ಯಾರಿಗಾದರೂ ಕೊರೊನಾ ಪಾಸಿಟಿವ್ ಬಂದಿದ್ದರೆ ಮಾತ್ರ ಮನೆಯಲ್ಲಿರುವ ಎಲ್ಲರೂ ಮಾಸ್ಕ್ ಧರಿಸುವುದು ಬಹಳ ಮುಖ್ಯ. ಏಕೆಂದರೆ ಮನೆಯಲ್ಲಿ ವೈರಸ್ ಇತರರಿಗೆ ಹರಡಬಹುದು ಎಂದು ರಾಷ್ಟಿçÃಯ ಕೋವಿಡ್ ಕಾರ್ಯದ ಮುಖ್ಯಸ್ಥರಾಗಿರುವ ನೀತಿ ಆಯೋಗದ ಸದಸ್ಯ (ಆರೋಗ್ಯ) ವಿ.ಕೆ. ಪಾಲ್ ಅವರು ಕೋವಿಡ್ ಸ್ಥಿತಿ ಕುರಿತು ಕೇಂದ್ರ ಆರೋಗ್ಯ ಸಚಿವಾಲಯದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ನಾವು ಮನೆಯಲ್ಲೂ ಮಾಸ್ಕ್ ಧರಿಸಲು ಪ್ರಾರಂಭಿಸುವ ಸಮಯ ಬಂದಿದೆ ಎಂದು ನಾನು ಹೇಳುತ್ತೇನೆ ಎಂದು ಅವರು ಹೇಳಿದ್ದಾರೆ. ಇಲ್ಲಿಯವರೆಗೆ ಸರ್ಕಾರ ಹೊರಗಡೆ ಮಾಸ್ಕ್ ಧರಿಸುವ ಬಗ್ಗೆ ಮಾತನಾಡುತ್ತಿತ್ತು. ಆದರೆ ಸೋಂಕು ಈಗ ಮನೆಮನೆಗೂ ಹರಡುತ್ತಿರುವುದರಿಂದ ಜನರು ಮನೆಯಲ್ಲಿಯೂ ಧರಿಸಬೇಕು ಎಂದಿದ್ದಾರೆ. ಕುಟುಂಬದಲ್ಲಿ ಯಾರಿಗಾದರೂ ಪಾಸಿಟಿವ್ ಬಂದಿದ್ದರೆ ಅವರು ಸಂಪೂರ್ಣವಾಗಿ ಪ್ರತ್ಯೇಕವಾಗಿರಬೇಕು ಮತ್ತು ಮನೆಯ ಇತರ ಸದಸ್ಯರೂ ಮನೆಯಲ್ಲಿಯೂ ಮಾಸ್ಕ್ ಧರಿಸಬೇಕು. ಇಲ್ಲದಿದ್ದರೆ, ಇದು ಅಪ್ರಾಯೋಗಿಕ ಮತ್ತು ನಿಜವಾಗಿಯೂ ಅಗತ್ಯವಿಲ್ಲ. ಮಾಸ್ಕ್ ಧರಿಸುವಂತೆ ಒತ್ತಿಹೇಳುವುದಕ್ಕಾಗಿ (ಪಾಲ್) ಬಹುಶಃ ಅವರು ಆ ರೀತಿ ಹೇಳಿರಬಹುದು ಎಂದು ಗುರುಗ್ರಾಮದ ಮೇದಾಂತ ಆಸ್ಪತ್ರೆಯ ವೈದ್ಯ ಯಾತಿನ್ ಮೆಹ್ತಾ ಅವರು ತಿಳಿಸಿದ್ದಾರೆ. ಈಗ ಮನೆಯಲ್ಲೂ ಮಾಸ್ಕ್ ಧರಿಸಬೇಕಾದ ಸಮಯ ಬಂದಿದೆ. ಅದರಲ್ಲೂ ನಿಮ್ಮ ಸುತ್ತಮುತ್ತ ಕೊರೊನಾ ಸೋಂಕಿತರು ಇದ್ದರೆ ಮಾಸ್ಕ್ ಧರಿಸಿಕೊಂಡಷ್ಟೂ ನೀವು ಸುರಕ್ಷಿತವಾಗಿರುತ್ತೀರಿ ಎಂದು ನಿನ್ನೆ ಕೇಂದ್ರ ಆರೋಗ್ಯ ಸಚಿವಾಲಯ ಹೇಳಿತ್ತು.
ಕಾಲ್ಸೆಂಟರ್ನಿAದ ಕೋವಿಡ್ ರೋಗಿಗಳಿಗೆ ಮಾರ್ಗದರ್ಶನ
ಬೆಂಗಳೂರು, ಏ. ೨೭: ಮನೆ ಆರೈಕೆಯಲ್ಲಿರುವ ಕೋವಿಡ್ ರೋಗಿಗಳಿಗೆ ಮಾರ್ಗದರ್ಶನ ನೀಡಲು ಕಾಲ್ಸೆಂಟರ್ನಲ್ಲಿ ಒಟ್ಟು ೧,೧೦೦ ಮಂದಿಯನ್ನು ನಿಯೋಜಿಸಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದರು. ಕೋವಿಡ್ ಟಾಸ್ಕ್ಫೋರ್ಸ್ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಈಗಾಗಲೇ ಕಾಲ್ಸೆಂಟರ್ನಲ್ಲಿ ೪೦೦ ಸಿಬ್ಬಂದಿ ಇದ್ದಾರೆ. ಮನೆ ಆರೈಕೆಯಲ್ಲಿರುವವರಿಗೆ ಕರೆ ಮಾಡಿ ಮಾರ್ಗದರ್ಶನ ನೀಡಲು ರೂ. ೧೧ ಕೋಟಿ ವೆಚ್ಚದಲ್ಲಿ ೬ ತಿಂಗಳಿಗೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ, ಹೊಸ ವ್ಯವಸ್ಥೆ ಮಾಡಲಾಗುವುದು. ಈ ಸಿಬ್ಬಂದಿ ಬೇರೆ ಬೇರೆ ವಿಭಾಗಗಳಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ಜೊತೆಗೆ ರೂ. ೨೦ ಕೋಟಿ ವೆಚ್ಚದಲ್ಲಿ ಟೆಲಿಮೆಡಿಸಿನ್, ವೈದ್ಯಕೀಯ ಸಲಹೆ ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ೨-೩ ಸಾವಿರ ಹಾಸಿಗೆಗಳ ಮೇಕ್ಶಿಫ್ಟ್ ಆಸ್ಪತ್ರೆಯನ್ನು ೧೫-೨೦ ದಿನಗಳಲ್ಲಿ ನಿರ್ಮಿಸಲಾಗುವುದು. ವಿಕ್ಟೋರಿಯಾ, ಬೌರಿಂಗ್, ರಾಜೀವ್ ಗಾಂಧಿ ಎದೆರೋಗಗಳ ಆಸ್ಪತ್ರೆ ಆವರಣದಲ್ಲಿ ಇಂತಹ ಆಸ್ಪತ್ರೆ ನಿರ್ಮಿಸಲಾಗುವುದು. ಒಂದು ಆಸ್ಪತ್ರೆಯಲ್ಲಿ ೨೦೦-೨೫೦ ಹಾಸಿಗೆಗಳಿದ್ದು, ಶೇ. ೨೦ ರಷ್ಟು ಐಸಿಯು ವೆಂಟಿಲೇಟರ್, ಶೇ. ೬೦ ರಷ್ಟು ಆಕ್ಸಿಜನ್, ಶೇ.೨೦ ರಷ್ಟು ಹೈ ಫ್ಲೋ ಆಕ್ಸಿಜನ್ ಇರಲಿದೆ. ಎಲ್ಲ ಜಿಲ್ಲೆಗಳಲ್ಲೂ ಈ ವ್ಯವಸ್ಥೆಯಾಗಲಿದೆ ಎಂದು ತಿಳಿಸಿದರು. ಪ್ರತಿ ಜಿಲ್ಲೆಯಲ್ಲಿ ೫೦-೧೦೦ ಹಾಸಿಗೆಗಳ ಕೋವಿಡ್ ಕೇರ್ಸೆಂಟರ್ ನಿರ್ಮಿಸಲಿದ್ದು, ೧೦%-೨೦% ಆಕ್ಸಿಜನ್ ಹಾಸಿಗೆ ಇರಲಿದೆ. ಪ್ರತಿ ಸೆಂಟರ್ನಲ್ಲಿ ೨೦ ಹಾಸಿಗೆಗಳಿಗೆ ಪೋರ್ಟೇಬಲ್ ಆಕ್ಸಿಜನ್ ನೀಡಲಾಗುವುದು. ಒಟ್ಟು ೪೦ ಸಾವಿರ ಪೋರ್ಟೇಬಲ್ ಆಕ್ಸಿಜನ್ ಆಮದು ಮಾಡುವ ಪ್ರಯತ್ನ ಮಾಡಲಾಗುತ್ತಿದೆ. ಬೆಂಗಳೂರಿನ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಒಂದು ಅಥವಾ ಎರಡು ಕೇರ್ಸೆಂಟರ್ ತೆರೆಯಲಾಗುವುದು ಎಂದರು. ಮುಂಬೈನಲ್ಲಿ ಕಫ್ರ್ಯೂ ವಿಧಿಸಿದ ಬಳಿಕ ದಿನಕ್ಕೆ ೩ ಸಾವಿರ ಪ್ರಕರಣ ಕಂಡುಬರುತ್ತಿದೆ. ಕಫ್ರ್ಯೂ ವಿಧಿಸಿದಾಗ ಸೋಂಕು ಕಡಿಮೆಯಾಗುತ್ತದೆ. ಆದ್ದರಿಂದಲೇ ರಾಜ್ಯ ಸರ್ಕಾರ ಕಫ್ರ್ಯೂ ತೀರ್ಮಾನ ಕೈಗೊಂಡಿದೆ. ಜನರು ಹೆಚ್ಚು ಓಡಾಡದೆ ಎಚ್ಚರ ವಹಿಸಬಾರದು. ಕಡಿಮೆ ಲಕ್ಷಣ ಇರುವ ಸೋಂಕಿತರು ಮನೆಯಿಂದ ಹೊರಗೆ ಹೋಗಿ ಹರಡಬಾರದು ಎಂದು ಕೋರಿದರು. ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಶಿಕ್ಷಣ ಸಚಿವ ಸುರೇಶ್ ಕುಮಾರ್ ಉಪಸ್ಥಿತರಿದ್ದರು. ಕೋವಿಡ್ ಅಂಕಿಅAಶ ಮುಚ್ಚಿಡುತ್ತಿಲ್ಲ. ಇದರಲ್ಲಿ ರಾಜಕೀಯ ಬೇಡ. ಈ ಸಂದರ್ಭದಲ್ಲಿ ಆಡಳಿತ ಪಕ್ಷ, ವಿರೋಧ ಪಕ್ಷ ಎಂದು ಇರಬಾರದು. ನುಮ ಸಂಜೀವಿನಿ ತಂದAತೆ, ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕೋವಿಡ್ ಲಸಿಕೆ ನೀಡಿದೆ. ಇದನ್ನು ಬಳಸಿಕೊಳ್ಳಿ. ಲಕ್ಷ್ಮಣರೇಖೆ ಹಾಕಿಕೊಂಡು ಮನೆಯಲ್ಲೇ ಇರಿ.