ಶನಿವಾರಸಂತೆ, ಏ. ೨೭: ರಾಜ್ಯ ಹಾಗೂ

ಕೇಂದ್ರ

ಸರಕಾರ

ಕೋವಿಡ್-೧೯ ವೈರಸ್ ೨ನೇ ಅಲೆಯನ್ನು ತಡೆಗಟ್ಟಲು ಪ್ರಯತ್ನಿಸಿದಷ್ಟೂ ಪ್ರಪಂಚದಾದ್ಯAತ ಈ ಮಹಾಮಾರಿ ತೀವ್ರಗತಿಯಲ್ಲಿ ಹರಡುತ್ತಿದೆ. ಇದಕ್ಕೆ ಜನತೆಯ ಉದಾಸೀನ ಮನೋಭಾವವೇ ಕಾರಣ ಎಂದು ಕೊಡ್ಲಿಪೇಟೆ ಕಿರಿಕೊಡ್ಲಿ ಮಠಾಧೀಶ ಸದಾಶಿವ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದರು.

ಮಂಗಳವಾರ ಪತ್ರಿಕಾ ಹೇಳಿಕೆ ನೀಡಿದ ಅವರು, ಸರಕಾರ ಆರೋಗ್ಯ ಇಲಾಖೆಯ ಮಾರ್ಗಸೂಚಿಯನ್ನು ಸಾರ್ವಜನಿಕರು ಸರಿಯಾಗಿ ಪಾಲಿಸದಿರುವುದೇ ಕೋವಿಡ್ ಸೋಂಕು ಪ್ರಕರಣ ಹೆಚ್ಚಾಗಲು ಕಾರಣ. ಸರಕಾರ ೪೫ ವರ್ಷ ಮೇಲ್ಪಟ್ಟ ನಾಗರಿಕರು ಕೋವಿಡ್ ಲಸಿಕೆ ಹಾಕಿಸಿಕೊಳ್ಳುವಂತೆ ಅಭಿಯಾನ ಹಮ್ಮಿಕೊಂಡಿದ್ದರೂ ಸ್ಪಂದಿಸುತ್ತಿಲ್ಲ. ಮೇ ೧ ರಿಂದ ೧೮ ವರ್ಷಕ್ಕೆ ಮೇಲ್ಪಟ್ಟ ಪ್ರತಿಯೊಬ್ಬರೂ ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಬೇಕು ಎಂದರು.

ಸರಕಾರದ ಮಾರ್ಗಸೂಚಿ ಪಾಲಿಸುವ ಮೂಲಕ ಕೋವಿಡ್-೧೯ ಹೆಮ್ಮಾರಿಯನ್ನು ತಡೆಗಟ್ಟುವ ಜವಾಬ್ದಾರಿ ಪ್ರತಿ ನಾಗರಿಕನ ಮೇಲಿದೆ. ಅನಗತ್ಯವಾಗಿ ತಿರುಗಾಡದೇ ಸ್ವಯಂ ಪ್ರೇರಿತರಾಗಿ ಕೋವಿಡ್ ವಿರುದ್ಧ ಸಮರ ಸಾರಬೇಕು ಎಂದು ಸ್ವಾಮೀಜಿ ಎಚ್ಚರಿಸಿದರು.