ಮಡಿಕೇರಿ, ಏ. ೨೭: ಜಿಲ್ಲೆಯಲ್ಲಿ ಮಂಗಳವಾರ ೨೯೭ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿದೆ. ೨೬೩ ಆರ್‌ಟಿಪಿಸಿಆರ್ ಮತ್ತು ೩೪ ಪ್ರಕರಣಗಳು ರ‍್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

ಮಡಿಕೇರಿ ತಾಲೂಕಿನಲ್ಲಿ ೫೭ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ. ಈ ಪೈಕಿ ೪೫ ಪ್ರಕರಣಗಳು ಆರ್‌ಟಿಪಿಸಿಆರ್ ಮತ್ತು ೧೨ ಪ್ರಕರಣಗಳು ರ‍್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಸೋಮವಾರಪೇಟೆ ತಾಲೂಕಿನಲ್ಲಿ ೮೪ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ. ಈ ಪೈಕಿ ೭೪ ಆರ್‌ಟಿಪಿಸಿಆರ್ ಮತ್ತು ೧೦ ಪ್ರಕರಣಗಳು ರ‍್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ವೀರಾಜಪೇಟೆ ತಾಲೂಕಿನಲ್ಲಿ ೧೫೬ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ. ಈ ಪೈಕಿ ೧೪೪ ಪ್ರಕರಣಗಳು ಆರ್‌ಟಿಪಿಸಿಆರ್ ಮತ್ತು ೧೨ ಪ್ರಕರಣಗಳು ರ‍್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೯೨೮೮ ಆಗಿದ್ದು, ೬೮೨೬ ಮಂದಿ ಗುಣಮುಖರಾಗಿದ್ದಾರೆ. ೨೩೬೯ ಸಕ್ರಿಯ ಪ್ರಕರಣಗಳಿದ್ದು, ೯೩ ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್‌ಮೆAಟ್ ವಲಯಗಳ ಸಂಖ್ಯೆ ೪೦೧ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತ ಸೋಮಲ್ ತಿಳಿಸಿದ್ದಾರೆ.