ಮಡಿಕೇರಿ, ಏ. ೨೭: ಐಬಿಪಿಎಸ್ ರಾಷ್ಟಿçÃಕೃತ ಬ್ಯಾಂಕ್ ಅವರು ಮುಂದಿನ ದಿನಗಳಲ್ಲಿ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ೫೦ ದಿನಗಳ ತರಬೇತಿಯನ್ನು ಆನ್‌ಲೈನ್ ಮೂಲಕ ನೀಡಲು ನಿರ್ಧರಿಸಿದೆ. ಆಸಕ್ತರು ತಾ. ೩೦ ರೊಳಗೆ ಬೆಳಿಗ್ಗೆ ೧೦ ಗಂಟೆಯಿAದ ಸಂಜೆ ೪ ಗಂಟೆಯವರೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ೦೮೨೧-೨೫೧೫೯೪೪ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವ ಡಾ. ಎ. ಖಾದರ್‌ಪಾಷ ತಿಳಿಸಿದ್ದಾರೆ.