ಕುಶಾಲನಗರ, ಏ. ೨೭: ಕುಶಾಲನಗರ ಸಮೀಪದ ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕೊರೊನಾ ಸೋಂಕಿತರಿಗೆ ಕಾಳಜಿ ಕೇಂದ್ರ ತೆರೆಯಲು ಜಿಲ್ಲಾಡಳಿತ ಕೈಗೊಂಡ ನಿರ್ಧಾರ ವಿರೋಧಿಸಿ ದಿಡ್ಡಲ್ಲಿ ನಿರಾಶ್ರಿತರ ಪುನರ್ವಸತಿ ಕೇಂದ್ರದ ನಿವಾಸಿಗಳು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
ಕೇಂದ್ರದ ನಿವಾಸಿಗಳು ವಸತಿ ಶಾಲೆಗೆ ತೆರಳುವ ರಸ್ತೆಗೆ ಕಲ್ಲುಗಳನ್ನು ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಡಳಿತ ತಕ್ಷಣ ಈ ನಿರ್ಧಾರ ಕೈಬಿಡಬೇಕೆಂದು ಆಗ್ರಹಿಸಿದರು.
ಬಸವನಹಳ್ಳಿ ಪುನರ್ವಸತಿ ಕೇಂದ್ರದ ಮುಖಂಡರು, ನಿವಾಸಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.