ಕೂಡಿಗೆ, ಏ. ೨೭: ಕೂಡಿಗೆ ಗ್ರಾಮ ಪಂಚಾಯಿತಿ ಮಾಸಿಕ ಸಭೆಯು ಗ್ರಾ.ಪಂ. ಅಧ್ಯಕ್ಷೆ ಮಂಗಳಾ ಪ್ರಕಾಶ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಕೋವಿಡ್ ವಿಷಯಗಳಿಗೆ ಸಂಬAಧಿಸಿದAತೆ ರೋಗ ತಡೆಗಟ್ಟುವ ಮುಂಜಾಗ್ರತಾ ಕ್ರಮದ ಮಹತ್ವದ ವಿಷಯಗಳ ಬಗ್ಗೆ ಚರ್ಚೆಗಳು ನಡೆದು, ಹಾಜರಿದ್ದ ಸದಸ್ಯರು ತಮ್ಮ ಸಲಹೆಗಳನ್ನು ನೀಡಿದರು.
ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದರೆ ಪರಿಹರಿಸಲು ಕೈಗೊಳ್ಳಬೇಕಾದ ಕ್ರಮದ ಬಗ್ಗೆ ಚರ್ಚೆಗಳಾದವು. ನಂತರ ಜಲಜೀವನ್ ಯೋಜನೆಯ ಕಾಮಗಾರಿಯ ರೂಪುರೇಷೆಗಳ ಬಗ್ಗೆ ಅಭಿವೃದ್ಧಿ ಅಧಿಕಾರಿಯಿಂದ ಮಾಹಿತಿಯನ್ನು ಸದಸ್ಯರು ಪಡೆದು ಯೋಜನೆಯ ಬಗ್ಗೆ ಚರ್ಚಿಸಿದರು.
ಇದೇ ಸಂದರ್ಭದಲ್ಲಿ ೧೫ನೇ ಹಣಕಾಸು ಯೋಜನೆಯ ಕಾಮಗಾರಿಯ ಕ್ರಿಯಾ ಯೋಜನೆಯನ್ನು ತಯಾರಿಸಲಾಗಿ ಅಗತ್ಯವಾದ ಕಾಮಗಾರಿಗಳನ್ನು ಕೈಗೊಳ್ಳಲು ತೀರ್ಮಾನಿಸಲಾಯಿತು.
ಅಭಿವೃದ್ಧಿ ಅಧಿಕಾರಿ ಅಯಿಷಾ ಸಭೆಗೆ ಬಂದ ಗ್ರಾಮಸ್ಥರ ಅರ್ಜಿಗಳ ಮಾಹಿತಿಯನ್ನು ನೀಡಿದರು. ಸಭೆಯಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ತಮ್ಮಣೆಗೌಡ, ಸದಸ್ಯರುಗಳಾದ ಟಿ.ಪಿ. ಹಮೀದ್, ಅರುಣ್ ರಾವ್, ಶಿವಕುಮಾರ್, ಅನಂತ್, ರವಿ ಹಾಜರಿದ್ದರು.