ಕೂಡಿಗೆ, ಏ. ೨೭: ಕೂಡಿಗೆ ಗ್ರಾಮ ಪಂಚಾಯಿತಿ ವತಿಯಿಂದ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಅಧ್ಯಕ್ಷೆ ಮಂಗಳಾ ಅಧ್ಯಕ್ಷತೆಯಲ್ಲಿ ಕೋವಿಡ್ಗೆ ಸಂಬAಧಿಸಿದAತೆ ಟಾಸ್ಕ್ ಫೋರ್ಸ್ ಸಮಿತಿ ಸಭೆ ನಡೆಯಿತು.
ಸಭೆಗೆ ಅಭಿವೃದ್ಧಿ ಅಧಿಕಾರಿ ಅಯಿಷಾ ಕೊರೊನಾ ಹಿನ್ನೆಲೆಯಲ್ಲಿ ಕೈಗೊಳ್ಳ ಬೇಕಾಗುವ ನಿಯಮಗಳು ಮತ್ತು ಕಟ್ಟುನಿಟ್ಟಿನ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು
ಕೂಡಿಗೆ ವ್ಯಾಪ್ತಿಯಲ್ಲಿ ಕೋವಿಡ್ ನಿಯಮಗಳನ್ನು ಪಾಲಿಸುವಂತೆ ಎಲ್ಲಾ ಅಂಗಡಿ ಮಾಲೀಕರಿಗೂ ಮತ್ತು ವಾಹನ ಚಾಲಕರಿಗೂ ಸೂಚಿಸ ಲಾಯಿತು. ಆಯಾ ವಾರ್ಡ್ಗಳಲ್ಲಿ ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡುವುದರ ಜೊತೆಗೆ ಎಲ್ಲಾ ಚರಂಡಿಗಳ ದುರಸ್ತಿ ಮತ್ತು ತುರ್ತಾಗಿ ಡಿಡಿಟಿ ಪೌಡರ್ ಸಿಂಪಡಣೆ ಮಾಡಲು ನಿರ್ಧರಿಸ ಲಾಯಿತು. ಕೊರೊನಾ ಲಕ್ಷಣಗಳು ಕಂಡುಬAದರೆ ತಕ್ಷಣವೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುವಂತೆ ಜಾಗೃತಿ ಮೂಡಿಸಲು ತೀರ್ಮಾನಿಸಲಾಯಿತು.
ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮೋಹಿನಿ ತಮ್ಮಣೆಗೌಡ ಸೇರಿದಂತೆ ಸರ್ವ ಸದಸ್ಯರು ಮತ್ತು ಕಾರ್ಯದರ್ಶಿ ಶಿಲ್ಪಾ ಹಾಜರಿದ್ದರು.