ಕೂಡಿಗೆ, ಏ. ೨೭: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವತಿಯಿಂದ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಅಧ್ಯಕ್ಷೆ ಇಂದಿರಾ ರಮೇಶ್ ಅವರ ಅಧ್ಯಕ್ಷತೆಯಲ್ಲಿ ಟಾಸ್ಕ್ ಫೋರ್ಸ್ ಸಭೆ ಜರುಗಿತು.
ಕೊರೊನಾ ಹೆಚ್ಚಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಗ್ರಾಮ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಾಗಿ ಕೈಗೊಳ್ಳಬೇಕಾದ ವಿಷಯಗಳ ಬಗ್ಗೆ ಚರ್ಚೆಗಳು ನಡೆದವು. ಸದಸ್ಯರು ಒಳಗೊಂಡAತೆ ಸಮಿತಿಯನ್ನು ರಚಿಸಲಾಯಿತು.
ಹಾಜರಿದ್ದ ಸದಸ್ಯರು ಮತ್ತು ಗ್ರಾಮದ ಪ್ರಮುಖರು ಕೋವಿಡ್‌ಗೆ ಸಂಬAಧಿಸಿದAತೆ ಟಾಸ್ಕ್ ಫೋರ್ಸ್ ಸಮಿತಿಗೆ ಸಲಹೆಗಳನ್ನು ನೀಡಿದರು.
ಅಭಿವೃದ್ಧಿ ಅಧಿಕಾರಿ ಸಂತೋಷ್ ಕೊರೊನಾ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾಗುವ ನಿಯಮಗಳು ಮತ್ತು ಕಟ್ಟುನಿಟ್ಟಿನ ಕ್ರಮಗಳ ಬಗ್ಗೆ ಸಭೆಗೆ ಮಾಹಿತಿ ನೀಡಿದರು.
ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹೆಚ್ಚು ಕೈಗಾರಿಕಾ ಘಟಕಗಳು ಇದ್ದು, ಜನರು ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಎಲ್ಲಾ ಅಂಗಡಿ ಮಾಲೀಕರಿಗೂ ಮತ್ತು ವಾಹನ ಚಾಲಕರಿಗೆ ತಿಳಿಸುವುದರ ಮೂಲಕ ಎಚ್ಚರಿಕೆ ನೀಡಲು ಕ್ರಮಕೈಗೊಳ್ಳಲಾಯಿತು. ಆಯಾ ವಾರ್ಡ್ಗಳಲ್ಲಿ ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡುವುದರ ಜೊತೆಗೆ ರೋಗ ನಿರೋಧಕ ಔಷಧಗಳನ್ನು ಸಿಂಪಡಣೆ ಮಾಡಲು ಕ್ರಮಕೈಗೊಳ್ಳಲಾಯಿತು. ಕೊರೊನಾ ಲಸಿಕೆಯನ್ನು ಕೂಡಿಗೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನೀಡುತ್ತಿರುತ್ತಾರೆ. ಆಯಾ ವಾರ್ಡ್ನ ಸದಸ್ಯರು ಅಲ್ಲಿನ ಗ್ರಾಮಸ್ಥರಿಗೆ ತಿಳಿಸುವಂತೆ ಸಭೆಯಲ್ಲಿ ಸೂಚಿಸಲಾಯಿತು.
ಈ ಸಂದರ್ಭ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಬಾಸ್ಕರ್ ನಾಯಕ್ ಸೇರಿದಂತೆ ಸರ್ವ ಸದಸ್ಯರು ಹಾಜರಿದ್ದರು.