ಸೋಮವಾರಪೇಟೆ, ಏ. ೨೭: ಕಳೆದ ವರ್ಷದ ಕೊರೊನಾ ಸಂಕಷ್ಟದ ಸಮಯದಲ್ಲಿ ಅತ್ಯಂತ ಕ್ರಿಯಾಶೀಲರಾಗಿದ್ದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಈ ವರ್ಷ ಕ್ರಿಯಾಶೀಲತೆ ತೋರುತ್ತಿಲ್ಲ. ಕೊರೊನಾ ನಿಯಂತ್ರಣಕ್ಕಾಗಿ ಇತರ ಇಲಾಖೆಗಳೊಂದಿಗೆ ಪಿಡಿಓಗಳು ಹೆಚ್ಚು ಜವಾಬ್ದಾರಿಯುತವಾಗಿ ಕೈಜೋಡಿಸಬೇಕೆಂದು ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಸೂಚಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ, ಜಿ.ಪಂ., ತಾ.ಪಂ. ವತಿಯಿಂದ ಇಲ್ಲಿನ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕೋವಿಡ್-೧೯ ತುರ್ತು ನಿರ್ವಹಣಾ ಸಭೆಯಲ್ಲಿ ಭಾಗವಹಿಸಿ ಸೋಮವಾರಪೇಟೆ, ಏ. ೨೭: ಕಳೆದ ವರ್ಷದ ಕೊರೊನಾ ಸಂಕಷ್ಟದ ಸಮಯದಲ್ಲಿ ಅತ್ಯಂತ ಕ್ರಿಯಾಶೀಲರಾಗಿದ್ದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಈ ವರ್ಷ ಕ್ರಿಯಾಶೀಲತೆ ತೋರುತ್ತಿಲ್ಲ. ಕೊರೊನಾ ನಿಯಂತ್ರಣಕ್ಕಾಗಿ ಇತರ ಇಲಾಖೆಗಳೊಂದಿಗೆ ಪಿಡಿಓಗಳು ಹೆಚ್ಚು ಜವಾಬ್ದಾರಿಯುತವಾಗಿ ಕೈಜೋಡಿಸಬೇಕೆಂದು ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಸೂಚಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ, ಜಿ.ಪಂ., ತಾ.ಪಂ. ವತಿಯಿಂದ ಇಲ್ಲಿನ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕೋವಿಡ್-೧೯ ತುರ್ತು ನಿರ್ವಹಣಾ ಸಭೆಯಲ್ಲಿ ಭಾಗವಹಿಸಿ ಕಾಪಾಡಿಕೊಂಡು ಉಳಿದವರ ಆರೋಗ್ಯ ಕಾಪಾಡುವ ಹೊಣೆಗಾರಿಕೆ ತಮ್ಮ ಮೇಲಿದ್ದು, ಎಲ್ಲರೂ ಒಟ್ಟಾಗಿ ಕೊರೊನಾ ನಿಯಂತ್ರಣಕ್ಕೆ ಸಹಕರಿಸಬೇಕೆಂದು ಮನವಿ ಮಾಡಿದರು.

ಪಿಡಿಓಗಳು ತಮ್ಮ ಕಚೇರಿ ಸಿಬ್ಬಂದಿಗಳು, ಸ್ಥಳೀಯ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರನ್ನು ಕೋವಿಡ್ ಸಂಬAಧಿತ ಕೆಲಸ ಕಾರ್ಯಗಳಿಗೆ ತೊಡಗಿಸಿಕೊಳ್ಳಬೇಕು ಎಂದ ರಂಜನ್, ತುರ್ತು ಸಂದರ್ಭದಲ್ಲಿ ಸಹಕರಿಸದ ಸಿಬ್ಬಂದಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಪ್ರತಿ ಪಂಚಾಯಿತಿಗಳ ವ್ಯಾಪ್ತಿಯಲ್ಲಿರುವ ಕೊರೊನಾ ಸೋಂಕಿತರು, ಹೋಂ ಕ್ವಾರಂಟೈನ್‌ನಲ್ಲಿರುವವರು, ಸಾವನ್ನಪ್ಪಿದವರ ಬಗ್ಗೆ ಶಾಸಕರು ಮಾಹಿತಿ ಪಡೆದರು. ಈಗಾಗಲೇ ಪ್ರಗತಿಯಲ್ಲಿರುವ ಲಸಿಕೆ ನೀಡಿಕೆಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು ಎಂದು ಸೂಚಿಸಿದರು.

ತಹಶೀಲ್ದಾರ್ ಗೋವಿಂದರಾಜು ಮಾತನಾಡಿ, ಕೊರೊನಾ ಸಂಬAಧಿತ ಸರ್ಕಾರ ಹೊರಡಿಸಿರುವ ಮಾರ್ಗ ಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತಿದೆ. ತಾಲೂಕಿನಲ್ಲಿ ಜಿಲ್ಲಾಧಿಕಾರಿಗಳ ಸೂಚನೆಯಂತೆ ಫ್ಲೆöÊಯಿಂಗ್ ಸ್ಕಾ÷್ವಡ್ ರಚಿಸಲಾಗಿದೆ. ಮಾಸ್ಕ್ ಹಾಕದವರ ವಿರುದ್ಧವೂ ಎಫ್‌ಐಆರ್ ದಾಖಲು ಮಾಡಲಾಗುತ್ತದೆ ಎಂದರು.

ತಾಲೂಕು ಆರೋಗ್ಯ ಇಲಾಖೆಯ ಡಾ. ಇಂದೂಧರ್ ಮಾತನಾಡಿ, ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಲಸಿಕೆ ವಿತರಣಾ ಕೇಂದ್ರಗಳಲ್ಲಿ ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆಯ ಕೊರತೆಯಿಲ್ಲ. ಮೇ ೧ ರಿಂದ ೧೮ ವರ್ಷ ಮೆಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲಾಗುವುದು. ಏ. ೨೮ರ ನಂತರ ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಕೊಳ್ಳಬಹುದು ಎಂದು ಮಾಹಿತಿ ನೀಡಿದರು.

ಸಭೆಯಲ್ಲಿದ್ದ ತಾ.ಪಂ. ಉಪಾಧ್ಯಕ್ಷ ಅಭಿಮನ್ಯುಕುಮಾರ್ ಮಾತನಾಡಿ, ಗ್ರಾಮೀಣ ಭಾಗದ ದೇವಾಲಯ, ಸಮುದಾಯ ಭವನ, ಶಾಲಾ ಆವರಣದಲ್ಲಿ ಮದುವೆ ಸಮಾರಂಭಗಳು ಹೆಚ್ಚು ನಡೆಯುತ್ತಿದ್ದು, ಸರ್ಕಾರದ ಮಾರ್ಗಸೂಚಿ ಉಲ್ಲಂಘನೆಯಾಗುತ್ತಿದೆ. ಈ ಬಗ್ಗೆ ಸಂಬAಧಿಸಿದ ಪಿಡಿಓಗಳು ಹೆಚ್ಚು ಗಮನ ಹರಿಸಬೇಕಿದೆ ಎಂದರು.

ಸಭೆಯಲ್ಲಿ ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಜಯಣ್ಣ, ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಚಪ್ಪ, ಕುಶಾಲನಗರ ಪ.ಪಂ. ಮುಖ್ಯಾಧಿಕಾರಿ ಕೃಷ್ಣಪ್ಪ, ತಾಲೂಕಿನ ಗ್ರಾ.ಪಂ.ಗಳ ಅಭಿವೃದ್ಧಿ ಅಧಿಕಾರಿಗಳು, ಗ್ರಾಮೀಣಾಭಿವೃದ್ಧಿ ಇಲಾಖಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.