ಮಡಿಕೇರಿ, ಏ. ೨೭: ಶ್ರೀ ವರ್ಧಮಾನ ಮಹಾವೀರ ಜಯಂತಿ ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾಡಳಿತದ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿಯಲ್ಲಿ ಆಚರಿಸಲಾಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಅವರು ಜ್ಯೋತಿ ಬೆಳಗಿಸಿ ಪುಷ್ಪಾರ್ಚನೆ ನೆರವೇರಿಸಿದರು.