*ಸಿದ್ದಾಪುರ, ಏ. ೨೮ : ಕೋವಿಡ್ ಸೋಂಕಿತರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರಪೇಟೆ ತಾಲೂಕಿನ ಕಾಜೂರು ಗ್ರಾಮದಲ್ಲಿ ನಡೆದಿದೆ.
ಬೆಂಗಳೂರಿನಲ್ಲಿ ಉದ್ಯೋಗ ದಲ್ಲಿದ್ದ ಐವತ್ತು ವರ್ಷದ ಪುರುಷರೊಬ್ಬರು ಹತ್ತು ದಿನಗಳ ಹಿಂದೆ ಸ್ವಗ್ರಾಮ ಸೋಮವಾರ ಪೇಟೆಯ ಕಾಜೂರಿಗೆ ಬಂದಿದ್ದರು. ತೀವ್ರ ಜ್ವರದಿಂದ ಬಳಲುತ್ತಿದ್ದ ಅವರು ಸೋಮವಾರ ಸೋಮವಾರಪೇಟೆ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದರು. ಮಂಗಳವಾರ ಕೋವಿಡ್ ಪಾಸಿಟಿವ್ ಎಂದು ತಿಳಿದು ಬಂದಿದ್ದು, ಇಂದು ಮನೆಯ ಪಕ್ಕದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.