ಪಾಲ್ಗೊಂಡವರನ್ನು ಹೋಮ್ ಕ್ವಾರಂಟೈನ್‌ಗೆ ಒಳಪಡಿಸಲು ಆಗ್ರಹ

ರಂಗಸಮುದ್ರ, ಏ. ೨೮: ಗುಡ್ಡೇಹೊಸೂರು ಗ್ರಾ.ಪಂ. ವ್ಯಾಪ್ತಿಯ ಬಸವನಹಳ್ಳಿಯ ಗಿರಿಜನ ಕಾಲೋನಿಯಲ್ಲಿ ಕೋವಿಡ್-೧೯ ನಿಯಮಗಳನ್ನು ಉಲ್ಲಂಘಿಸಿ ನಡೆದ ಮದುವೆ ಸಮಾರಂಭದಿAದಾಗಿ ಇಲ್ಲಿನ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಕೂಡಲೇ ಜಿಲ್ಲಾಡಳಿತ ಸಮಾರಂಭದಲ್ಲಿ ಪಾಲ್ಗೊಂಡವರನ್ನು ಪತ್ತೆ ಹಚ್ಚಿ ಹೋಮ್ ಕ್ವಾರಂಟೈನ್‌ಗೆ ಒಳಪಡಿಸಬೇಕು ಎಂದು ಸ್ಥಳೀಯ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ನಿಯಮಗಳನ್ನು ಗಾಳಿಗೆ ತೂರಿ ಮದುವೆ ನಡೆದಿದ್ದರೂ, ಈವರೆಗೆ ಸಂಬAಧಪಟ್ಟ ಅಧಿಕಾರಿಗಳು ಕ್ರಮಕೈಗೊಳ್ಳದ ಬಗ್ಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.