ಮಡಿಕೇರಿ, ಏ. ೨೮: ಜಿಲ್ಲೆಯಲ್ಲಿ ಕೋವಿಡ್-೧೯ ವ್ಯಾಪಕವಾಗಿ ಹರಡುತ್ತಿರುವುದರಿಂದ ಜಿಲ್ಲಾಡಳಿತ ಕೆಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿರುತ್ತದೆ. ಆದುದರಿಂದ ಜಿಲ್ಲೆಯ ಮುಸ್ಲಿಂ ಬಾಂಧವರು ಈ ನಿಯಮಗಳನ್ನು ಪಾಲಿಸಲು ಬದ್ಧರಾಗಿದ್ದು, ಮೇ ೧೨ರ ವರೆಗೆ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸದೆ ರಾಜ್ಯ ಸರಕಾರದ ಆದೇಶ ಪಾಲಿಸಬೇಕು ಎಂದು ಜಿಲ್ಲೆಯ ಉಪ ಖಾಝಿಗಳಾದ ಮಹಮೂದ್ ಮುಸ್ಲಿಯಾರ್ ಅವರು ಪತ್ರಿಕಾ ಪ್ರಕಟಣೆಯ ಮೂಲಕ ವಿನಂತಿಸಿಕೊAಡಿದ್ದಾರೆ.