ವೀರಾಜಪೇಟೆ, ಏ. ೨೯: ವೀರಾಜಪೇಟೆ ಪಟ್ಟಣದಲ್ಲಿ ಕೊರೊನಾ ಸೋಂಕು ಹರಡದಂತೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಹೇಮಕುಮಾರ್ ಮಾರ್ಗದರ್ಶನದಲ್ಲಿ ಅಗ್ನಿಶಾಮಕ ದಳದಿಂದ ಪಟ್ಟಣದ ಎಲ್ಲಾ ಬೀದಿಗಳು ಸೇರಿದಂತೆ ಸಾರ್ವಜನಿಕ ಆಸ್ಪತ್ರೆ, ತಾಲೂಕು ಕಚೇರಿ, ನ್ಯಾಯಾಲಯ ಸೇರಿದಂತೆ ಇತರ ಕಡೆಗಳಲ್ಲಿ ಸ್ಯಾನಿಟೈಸಿಂಗ್ ಮಾಡಲಾಯಿತು.

ಬುಧವಾರ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ವೀರಾಜಪೇಟೆ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭ ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷೆ ಜೂನಾ ಸುನೀತಾ ಹಾಗೂ ಡಿ.ಪಿ. ರಾಜೇಶ್ ಪಟ್ಟಣದಲ್ಲಿ ಸ್ಯಾನಿಟೈಸಿಂಗ್ ಮಾಡುವಂತೆ ಮನವಿ ಮಾಡಿದ್ದರು.