ಕುಶಾಲನಗರ, ಏ. ೨೯: ಕುಶಾಲನಗರ ಪಟ್ಟಣ ವ್ಯಾಪ್ತಿಯಲ್ಲಿ ಸಂತೆ ನಡೆಸುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಪ್ರತಿದಿನ ಸಾರ್ವಜನಿಕರಿಗೆ ಸೇವೆ ಒದಗಿಸುವ ಸಲುವಾಗಿ ಕೃಷಿ ಮಾರುಕಟ್ಟೆ ಆವರಣದಲ್ಲಿ ಸ್ಥಳೀಯ ತರಕಾರಿ ವ್ಯಾಪಾರಸ್ಥರಿಗೆ ಮಾತ್ರ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಕುಶಾಲನಗರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ಸ್ಪಷ್ಟಪಡಿಸಿದ್ದಾರೆ.
ಅವರು ಪತ್ರಿಕಾ ಪ್ರಕಟಣೆ ನೀಡಿದ್ದು, ಪ್ರತಿ ದಿನ ಯಾವುದೇ ಸಂತೆ ಇರುವುದಿಲ್ಲ. ಕುಶಾಲನಗರ ಪಟ್ಟಣ ವ್ಯಾಪ್ತಿಯ ವ್ಯಾಪಾರಸ್ಥರು ಹಾಗೂ ಸಾರ್ವಜನಿಕರಿಗೆ ಸೇವೆ ಒದಗಿಸುವ ಸಲುವಾಗಿ ಈ ವ್ಯವಸ್ಥೆ ಕಲ್ಪಿಸಲಾಗಿದ್ದು, ಪ್ರತಿದಿನ ಬೆಳಿಗ್ಗೆ ೬ ರಿಂದ ೧೦ ರ ತನಕ ಮಾತ್ರ ಅವಕಾಶ ಇರುವುದು, ಈ ಅವಧಿಯಲ್ಲಿ ಕೋವಿಡ್ ನಿಯಮವನ್ನು ಅನುಸರಿಸಿ ಖರೀದಿಸುವುದು ಮತ್ತು ವ್ಯಾಪಾರಿಗಳು ನಿಯಮಗಳನ್ನು ಪಾಲಿಸುವುದು ಕಡ್ಡಾಯವಾಗಿದೆ ಎಂದು ಕೃಷ್ಣಪ್ರಸಾದ್ ತಿಳಿಸಿದ್ದಾರೆ.