ಮಡಿಕೇರಿ, ಏ. ೨೯: ಕೋವಿಡ್-೧೯ ಸೋಂಕು ಹರಡುವಿಕೆ ತಡೆಗಟ್ಟುವ ಸಲುವಾಗಿ ಪಡಿತರ ಆಹಾರ ಧಾನ್ಯವನ್ನು ಬಯೋಮೆಟ್ರಿಕ್ ಅಥವಾ ಪಡಿತರ ಚೀಟಿ, ಕುಟುಂಬದ ಯಾವುದೇ ಸದಸ್ಯರ ಆಧಾರ್ ಜೊತೆ ಜೋಡಣೆಯಾಗಿರುವ ಮೊಬೈಲ್ ಸಂಖ್ಯೆಗೆ ಓಟಿಪಿಯನ್ನು ಕಳುಹಿಸಿ ಪಡಿತರ ಚೀಟಿದಾರರಿಗೆ ಆಹಾರ ಧಾನ್ಯಗಳನ್ನು ವಿತರಣೆ ಮಾಡುವಂತೆ ಜಿಲ್ಲೆಯ ನ್ಯಾಯಬೆಲೆ ಅಂಗಡಿದಾರರಿಗೆ ಹಾಗೂ ಪಡಿತರ ಚೀಟಿ ಫಲಾನುಭವಿಗಳಿಗೆ ಸೂಚಿಸಲಾಗಿದೆ. ಸರಕಾರದಿಂದ ದತ್ತಾಂಶದಲ್ಲಿ ಇದಕ್ಕೆ ಅವಕಾಶ ಇರುತ್ತದೆ. ನ್ಯಾಯಬೆಲೆ ಅಂಗಡಿಗಳಲ್ಲಿ ಕೋವಿಡ್-೧೯ರ ಮಾರ್ಗಸೂಚಿಯನ್ನು ಪಾಲಿಸಲು ಹಾಗೂ ಸ್ಯಾನಿಟೈಸರ್, ಮಾಸ್ಕ್ ಕಡ್ಡಾಯವಾಗಿ ಬಳಸಿ ಪಡಿತರ ಆಹಾರ ಧಾನ್ಯ ವಿತರಿಸಲಾಗುತ್ತದೆ ಎಂದು ಆಹಾರ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.