ಮಡಿಕೇರಿ, ಏ. ೨೯: ಕೋವಿಡ್-೧೯ ಸೋಂಕು ನಿಯಂತ್ರಣಕ್ಕೆ ಸಂಬAಧಿಸಿದAತೆ ರಾಜ್ಯ ಸರಕಾರ ತಾ. ೨೭ರ ರಾತ್ರಿ ೯ ಗಂಟೆಯಿAದ ಮೇ ೧೨ರ ಬೆಳಿಗ್ಗೆ ೬ ಗಂಟೆಯವರೆಗೆ ಕರ್ಫ್ಯೂ ಜಾರಿ ಮಾಡಿದ್ದು, ಈ ಸಂಬAಧ ಹೊರ ರಾಜ್ಯ, ಜಿಲ್ಲೆ, ಪ್ರದೇಶ ಗಳಿಂದ ಕೊಡಗು ಜಿಲ್ಲೆಗೆ ಅನೇಕ ಜನರು ಆಗಮಿಸುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದ್ದು, ಜಿಲ್ಲೆಗೆ ಮಡಿಕೇರಿ, ಏ. ೨೯: ಕೋವಿಡ್-೧೯ ಸೋಂಕು ನಿಯಂತ್ರಣಕ್ಕೆ ಸಂಬAಧಿಸಿದAತೆ ರಾಜ್ಯ ಸರಕಾರ ತಾ. ೨೭ರ ರಾತ್ರಿ ೯ ಗಂಟೆಯಿAದ ಮೇ ೧೨ರ ಬೆಳಿಗ್ಗೆ ೬ ಗಂಟೆಯವರೆಗೆ ಕರ್ಫ್ಯೂ ಜಾರಿ ಮಾಡಿದ್ದು, ಈ ಸಂಬAಧ ಹೊರ ರಾಜ್ಯ, ಜಿಲ್ಲೆ, ಪ್ರದೇಶ ಗಳಿಂದ ಕೊಡಗು ಜಿಲ್ಲೆಗೆ ಅನೇಕ ಜನರು ಆಗಮಿಸುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದ್ದು, ಜಿಲ್ಲೆಗೆ ತಪಾಸಣೆ ಕೈಗೊಳ್ಳಲಾಗಿದೆ.

ಕುಟ್ಟ ಚೆಕ್‌ಪೋಸ್ಟ್ನಲ್ಲಿ ಬಿಗಿ ಕ್ರಮ

ಕೊರೊನಾ ಎರಡನೇ ಅಲೆ ಜಿಲ್ಲೆಯಲ್ಲಿ ವ್ಯಾಪಕವಾಗಿ ಕಂಡು ಬರುತ್ತಿರುವ ಹಿನ್ನೆಲೆ ಕೊಡಗಿನ ಗಡಿಭಾಗ ಕೇರಳ ಅಂತರ ರಾಜ್ಯ ಸಂಪರ್ಕ ರಸ್ತೆಯಾದ ಕುಟ್ಟದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಪೊಲೀಸರು ಹಾಗೂ ಅಧಿಕಾರಿಗಳು ಕುಟ್ಟ ಚೆಕ್‌ಪೋಸ್ಟ್ನಲ್ಲಿ ಸಾರ್ವಜನಿಕರ ಓಡಾಟಕ್ಕೆ ಸಂಪೂರ್ಣ ನಿರ್ಬಂಧ ಹೇರಿದ್ದಾರೆ. ಜಿಲ್ಲಾಡಳಿತ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದಾರೆ.

(ಮೊದಲ ಪುಟದಿಂದ) ಹಗಲು ಹಾಗೂ ರಾತ್ರಿ ಪಾಳಿಯಲ್ಲಿ ಪೊಲೀಸರು ಕರ್ತವ್ಯ ನಿರ್ವಹಿಸುತ್ತಿದ್ದು ರಸ್ತೆಗೆ ಬ್ಯಾರಿಕೇಡ್ ಇಟ್ಟು ತಪಾಸಣೆ ನಡೆಸುತ್ತಿದ್ದಾರೆ. ಅಗತ್ಯ ಸಾಮಗ್ರಿಗಳ ಸಾಗಾಟದ ಗೂಡ್ಸ್ ವಾಹನಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಚಾಲಕರು ಕೋವಿಡ್ ನಿಯಮದಂತೆ ಪರೀಕ್ಷೆ ನಡೆಸಿದ ಪತ್ರ ಇದ್ದಲ್ಲಿ ಮಾತ್ರ ಅಂತಹ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗುತ್ತಿದೆ.

ಕುಟ್ಟ ಪೊಲೀಸ್ ವೃತ್ತ ನಿರೀಕ್ಷಕ ಪರಶಿವಮೂರ್ತಿ ಹಾಗೂ ಸಿಬ್ಬಂದಿ ಗಡಿಭಾಗ ಕುಟ್ಟದಲ್ಲಿ ವಿಶೇಷ ಭದ್ರತೆ ಒದಗಿಸುವ ಮೂಲಕ ಯಾವುದೇ ವ್ಯಕ್ತಿ ಹೊರ ರಾಜ್ಯದಿಂದ ಆಗಮಿಸದಂತೆ ಕಟ್ಟುನಿಟ್ಟಿನ ಕ್ರಮಕೈಗೊಂಡಿದ್ದಾರೆ. ಕುಟ್ಟ ವ್ಯಾಪ್ತಿಯ ಟಿ. ಶೆಟ್ಟಿಗೇರಿಯಲ್ಲಿ ಬ್ಯಾರಿಕೇಡ್ ಅಳವಡಿಸಿ ಕುಟ್ಟ ಮಾರ್ಗಕ್ಕೆ ಆಗಮಿಸುವ ವಾಹನಗಳನ್ನು ಇಲ್ಲಿಂದಲೇ ವಾಪಾಸು ಕಳುಹಿಸಲು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ.

ಕುಶಾಲನಗರ ಗಡಿಯಲ್ಲಿ ತಪಾಸಣೆ

ಜಿಲ್ಲೆಯಲ್ಲಿ ಕೋವಿಡ್-೧೯ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮಕೈಗೊಳ್ಳಲು ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ ನೀಡಿದ ಹಿನ್ನೆಲೆ ಕೊಡಗು-ಮೈಸೂರು, ಕುಶಾಲನಗರ ಗಡಿಭಾಗದಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿರುವುದು ಕಂಡುಬAದಿದೆ. ಹೊರ ರಾಜ್ಯ, ಜಿಲ್ಲೆ, ಪ್ರದೇಶಗಳಿಂದ ಕೊಡಗು ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿರುವುದು ಗಮನಕ್ಕೆ ಬಂದಿದ್ದು, ಈ ನಿಟ್ಟಿನಲ್ಲಿ ಸಂಬAಧಿಸಿದ ಇಲಾಖೆಗಳು ಪರಿಶೀಲನೆ ನಡೆಸುವಂತೆ ಕೊಡಗು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದ ಬೆನ್ನಲ್ಲೇ ಕುಶಾಲನಗರ ಡಿವೈಎಸ್‌ಪಿ ಶೈಲೇಂದ್ರ ಕುಮಾರ್, ಪೊಲೀಸ್ ವೃತ್ತ ನಿರೀಕ್ಷಕ ಮಹೇಶ್, ನೇತೃತ್ವದಲ್ಲಿ ಪೊಲೀಸರ ತಂಡ ಜಿಲ್ಲೆಗೆ ಪ್ರವೇಶಿಸುವ ಜನರ ಬಗ್ಗೆ ನಿಗಾ ವಹಿಸುತ್ತಿದ್ದಾರೆ. ಕುಶಾಲನಗರ ಅರಣ್ಯ ತಪಾಸಣಾ ಗೇಟ್ ಬಳಿ ಮೈಸೂರು ಕಡೆಯಿಂದ ಕೊಡಗು ಜಿಲ್ಲೆಗೆ ಆಗಮಿಸುತ್ತಿದ್ದ ಹಲವು ಖಾಸಗಿ ವಾಹನಗಳನ್ನು ತಡೆದು ಪರಿಶೀಲಿಸಿ ವಾಪಾಸ್ ಕಳುಹಿಸುತ್ತಿರುವ ದೃಶ್ಯ ಕಂಡುಬAತು.

ಅನಾವಶ್ಯಕವಾಗಿ ಓಡಾಡುತ್ತಿದ್ದ ದ್ವಿಚಕ್ರ ವಾಹನ ಸವಾರರಿಗೆ ಲಾಠಿ ರುಚಿ ಕೂಡ ನೀಡಿದ್ದು ಗೋಚರಿಸಿತು. ಲಾಕ್‌ಡೌನ್ ಅವಧಿಯಲ್ಲಿ ಸರ್ಕಾರ ರಿಯಾಯಿತಿ ನೀಡಿದ ವಾಹನಗಳಿಗಷ್ಟೇ ಅವಕಾಶ ಕಲ್ಪಿಸುವುದರೊಂದಿಗೆ ಇತರೆ ವಾಹನಗಳಿಗೆ ಸಂಪೂರ್ಣ ತಡೆ ಒಡ್ಡಲಾಯಿತು. ಕುಶಾಲನಗರ ಪಟ್ಟಣ ಸಂಪೂರ್ಣ ಬಂದ್ ಆಗಿತ್ತು. ಕುಶಾಲನಗರ ಪೊಲೀಸ್ ಠಾಣಾಧಿಕಾರಿ ಗಣೇಶ್, ಸಂಚಾರಿ ಠಾಣಾಧಿಕಾರಿ ಚಂದ್ರಶೇಖರ್ ಮತ್ತು ಸಿಬ್ಬಂದಿಗಳು ಗಡಿಭಾಗದಲ್ಲಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಶಿರAಗಾಲ ಗೇಟ್ ಬಂದ್

ಕೂಡಿಗೆ: ಕೊಡಗಿನ ಗಡಿ ಭಾಗದ ಶಿರಂಗಾಲ ಗೇಟ್ ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಶಿರಂಗಾಲದ ಗೇಟ್‌ನಲ್ಲಿ ಅರಣ್ಯ ತಪಾಸಣಾ ಇಲಾಖೆಯ ಕಚೇರಿ ಇದ್ದು ಇದರ ಜೊತೆಯಲ್ಲಿ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಶಿವಶಂಕರ್ ನೇತೃತ್ವದಲ್ಲಿ ಬಂದೋಬಸ್ತ್ ಮಾಡಲಾಗಿದೆ. ಅಲ್ಲದೆ ಹೊರ ಜಿಲ್ಲೆಯಿಂದ ಜಿಲ್ಲೆಗೆ ಬರುವವರನ್ನು ತಪಾಸಣೆ ಮಾಡಲಾಗುತ್ತಿದೆ.