ಶನಿವಾರಸಂತೆ, ಏ. ೩೦: ಸಮೀಪದ ಕೊಡ್ಲಿಪೇಟೆಯ ಅಂಬೇಡ್ಕರ್ ಭವನದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಟಾಸ್ಕ್ಫೋರ್ಸ್ ಸಮಿತಿ ಸಭೆ ನಡೆಯಿತು.
ಸಭೆಯಲ್ಲಿ ಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟಲು ಕ್ರಮಕೈಗೊಳ್ಳುವುದು ಹಾಗೂ ಸರಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಲು ತೀರ್ಮಾನಿಸಲಾಯಿತು. ಅಧ್ಯಕ್ಷತೆ ವಹಿಸಿದ್ದ ಅಧ್ಯಕ್ಷ ಕೆ.ಆರ್. ಚಂದ್ರಶೇಖರ್ ಮಾತನಾಡಿ, ಹೋಂಕ್ವಾರAಟೈನ್ನಲ್ಲಿರುವ ರೋಗಿಗಳ ಬಗ್ಗೆ ಕಾಳಜಿವಹಿಸಿ ಆರೋಗ್ಯ ಇಲಾಖೆಯ ಸೌಲಭ್ಯಗಳನ್ನು ತಲುಪಿಸುವಂತೆ ಸಮಿತಿ ಸದಸ್ಯರಿಗೆ ನಿರ್ದೇಶನ ನೀಡಿದರು. ಪಿಡಿಓ ಹರೀಶ್, ಸಮಿತಿ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಸದಸ್ಯರಾದ ನಗೀನಾಬಾನು, ಪ್ರಸನ್ನ, ಕವಿತಾ, ಮುತ್ತಮ್ಮ, ಕಾರ್ಯದರ್ಶಿ ಹರಿಣಿ, ಸಿಬ್ಬಂದಿ ದೀಪು, ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ. ಆದೀರಾ, ಸಿಬ್ಬಂದಿ, ಅಂಗನವಾಡಿ ಶಿಕ್ಷಕಿಯರು, ಆಶಾ ಕಾರ್ಯಕರ್ತೆಯರು ಹಾಜರಿದ್ದರು.