ಸೋಮವಾರಪೇಟೆ, ಮೇ ೨ : ತಾಲೂಕಿನ ಸರ್ಕಾರಿ ಪ್ರೌಢಶಾಲೆಗಳ ಹತ್ತನೆ ತರಗತಿಯ ಪ್ರತಿಭಾವಂತ ಬಡ ವಿದ್ಯಾರ್ಥಿðಗಳಿಗೆ ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಹಾಗೂ ಪಬ್ಲಿಕ್ ಟಿವಿ ಸಹಯೋಗದಲ್ಲಿ ಉಚಿತ ಟ್ಯಾಬ್‌ಗಳನ್ನು ವಿತರಿಸಲಾಯಿತು.

ಪಟ್ಟಣದಲ್ಲಿರುವ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ತಾಲೂಕಿನ ವಿವಿಧ ಪ್ರೌಢಶಾಲೆಯ ಮುಖ್ಯ ಶಿಕ್ಷಕರುಗಳ ಮೂಲಕ ಇಸಿಒ ರಾಧಕೃಷ್ಣ ಅವರು ಟ್ಯಾಬ್‌ಗಳನ್ನು ಹಸ್ತಾಂತರಿಸಿದರು. ಈ ಸಂದರ್ಭ ಬಿಇಒ ಎಚ್.ಕೆ. ಪಾಂಡು, ಬಿ.ಆರ್.ಪಿ. ಲೋಕೇಶ್, ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ. ಸೋಮಶೇಖರ್ ಉಪಸ್ಥಿತರಿದ್ದರು.