ಸೋಮವಾರಪೇಟೆ, ಮೇ. ೨: ತಾಲೂಕಿನ ಕೊಡ್ಲಿಪೇಟೆ ಸಮೀಪದ ಹಂಪಾಪುರದ ಹೇಮಾವತಿ ಹಿನ್ನೀರು ಪ್ರದೇಶದಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದ ಅಡ್ಡೆಯ ಮೇಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖಾಧಿಕಾರಿಗಳ ತಂಡ ದಾಳಿ ನಡೆಸಿದ್ದು, ಗಣಿಗಾರಿಕೆಗೆ ಬಳಸಲಾಗಿದ್ದ ಯಾಂತ್ರಿಕ ದೋಣಿಯನ್ನು ಸೋಮವಾರಪೇಟೆ, ಮೇ. ೨: ತಾಲೂಕಿನ ಕೊಡ್ಲಿಪೇಟೆ ಸಮೀಪದ ಹಂಪಾಪುರದ ಹೇಮಾವತಿ ಹಿನ್ನೀರು ಪ್ರದೇಶದಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದ ಅಡ್ಡೆಯ ಮೇಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖಾಧಿಕಾರಿಗಳ ತಂಡ ದಾಳಿ ನಡೆಸಿದ್ದು, ಗಣಿಗಾರಿಕೆಗೆ ಬಳಸಲಾಗಿದ್ದ ಯಾಂತ್ರಿಕ ದೋಣಿಯನ್ನು ಹಂಪಾಪುರ ಗ್ರಾಮ ವ್ಯಾಪ್ತಿಯ ಹೇಮಾವತಿ ಹಿನ್ನೀರು ಪ್ರದೇಶದಲ್ಲಿ ಸರ್ಕಾರದ ಯಾವುದೇ ಪರವಾನಗಿ ಇಲ್ಲದೇ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದ ಬಗ್ಗೆ ಹಲವಷ್ಟು ದೂರುಗಳು ಕೇಳಿಬರುತ್ತಿರುವ ಸಂದರ್ಭದಲ್ಲೇ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಸ್ಥಳದಲ್ಲಿದ್ದ ದೋಣಿಯನ್ನು ವಶಕ್ಕೆ ಪಡೆದಿದ್ದಾರೆ.
ಇದರೊಂದಿಗೆ ಪರವಾನಗಿ ಇಲ್ಲದೇ ಅಕ್ರಮವಾಗಿ ಮರಳು ಸಾಗಾಟಗೊಳಿಸುತ್ತಿದ್ದ ಎರಡು ಲಾರಿ (ಕೆ.ಎ. ೨೬ ಎ. ೪೪೧೬ ಹಾಗೂ ಕೆ.ಎ. ೧೨. ಬಿ. ೧೫೨೦) ಮತ್ತು ಅಕ್ರಮವಾಗಿ ಜಲ್ಲಿಕಲ್ಲು ಸಾಗಿಸುತ್ತಿದ್ದ ಕೆ.ಎ.೩ ಎ.ಎ.೪೯೮ ಸಂಖ್ಯೆಯ ಲಾರಿಯನ್ನು ವಶಪಡಿಸಿಕೊಂಡು, ಮೊಕದ್ದಮೆ ದಾಖಲಿಸಲಾಗಿದೆ.
ಅಕ್ರಮ ಮರಳುಗಾರಿಕೆ-ಜಲ್ಲಿ ಸಾಗಾಟದ ವಿರುದ್ಧ ಅಧಿಕಾರಿಗಳ ಕ್ರಮ(ಮೊದಲ ಪುಟದಿಂದ) ವಶಪಡಿಸಿಕೊಂಡ ವಾಹನಗಳನ್ನು ಮುಂದಿನ ಆದೇಶದವರೆಗೆ ಶನಿವಾರಸಂತೆ ಪೊಲೀಸ್ ಠಾಣೆಯ ವಶಕ್ಕೆ ಒಪ್ಪಿಸಲಾಗಿದೆ.
ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿಗಳ ಸೂಚನೆಯಂತೆ ನಡೆದ ಕಾರ್ಯಾಚರಣೆಯಲ್ಲಿ ಭೂ ವಿಜ್ಞಾನಿಗಳಾದ ಹೆಚ್.ಡಿ. ರೋಜಾ, ಲೋಯಲ್, ರಾಹುಲ್, ಸೋಮವಾರಪೇಟೆ ಪೊಲೀಸ್ ವೃತ್ತ ನಿರೀಕ್ಷಕ ಬಿ.ಜಿ. ಮಹೇಶ್ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.