ಕುಶಾಲನಗರ, ಮೇ ೨: ಸೋಮವಾರಪೇಟೆ, ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಅಧಿಕಗೊಳ್ಳುತ್ತಿರುವ ಕೊರೊನಾ ಸೋಂಕಿತ ಪ್ರಕರಣ ಹಿನ್ನೆಲೆಯಲ್ಲಿ ಕುಶಾಲನಗರ ಸರಕಾರಿ ಆಸ್ಪತ್ರೆ ಆವರಣದಲ್ಲಿ ಜನರ ಒತ್ತಡ ಹೆಚ್ಚಳವಾಗುತ್ತಿದ್ದು, ಗಂಟಲು ದ್ರವ ಪರೀಕ್ಷೆ ಮತ್ತು ಕೋವಿಡ್ ಲಸಿಕೆ ನೀಡುವ ಕೇಂದ್ರಗಳನ್ನು ಕುಶಾಲನಗರದ ರೈತ ಸಹಕಾರ ಭವನ ಕುಶಾಲನಗರ, ಮೇ ೨: ಸೋಮವಾರಪೇಟೆ, ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಅಧಿಕಗೊಳ್ಳುತ್ತಿರುವ ಕೊರೊನಾ ಸೋಂಕಿತ ಪ್ರಕರಣ ಹಿನ್ನೆಲೆಯಲ್ಲಿ ಕುಶಾಲನಗರ ಸರಕಾರಿ ಆಸ್ಪತ್ರೆ ಆವರಣದಲ್ಲಿ ಜನರ ಒತ್ತಡ ಹೆಚ್ಚಳವಾಗುತ್ತಿದ್ದು, ಗಂಟಲು ದ್ರವ ಪರೀಕ್ಷೆ ಮತ್ತು ಕೋವಿಡ್ ಲಸಿಕೆ ನೀಡುವ ಕೇಂದ್ರಗಳನ್ನು ಕುಶಾಲನಗರದ ರೈತ ಸಹಕಾರ ಭವನ ನಿರ್ವಹಣೆ ಮಾಡುತ್ತದೆ ಎಂದರು. ಆರೋಗ್ಯ, ಕಂದಾಯ, ತಾಲೂಕು ಪಂಚಾಯತ್, ಜಂಟಿಯಾಗಿ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತವೆ. ಜನರು ಸೌಲಭ್ಯದ ಸದುಪಯೋಗ ಪಡೆಯಲು ಕೋರಿದರು. ಕುಶಾಲನಗರ ಸರಕಾರಿ ಆಸ್ಪತ್ರೆ ಬಳಿ ಲಸಿಕೆ ಹಾಕಿಸಿಕೊಳ್ಳಲು ಮತ್ತು ಗಂಟಲು ದ್ರವ ಪರೀಕ್ಷೆಗೆ ಬಂದ ಸಂದರ್ಭದಲ್ಲಿ ಉಂಟಾಗುವ ನೂಕುನುಗ್ಗಲು ತಪ್ಪಿಸಲು ಈ ಕ್ರಮ ಕೈಗೊಳ್ಳಲಾಯಿತು ಎಂದು ತಹಶೀಲ್ದಾರ್ ಗೋವಿಂದ ರಾಜ್ ತಿಳಿಸಿದರು.

ಈ ಸಂದರ್ಭ ತಾಲೂಕು ಕಾರ್ಯ ನಿರ್ವಹಣಾಧಿಕಾರಿ ಜಯಣ್ಣ, ಸಂತೋಷ್ ಮತ್ತಿತರರು ನೂತನ ಕೇಂದ್ರ ಪರಿಶೀಲನೆ ನಡೆಸಿದರು.