ಕೂಡಿಗೆ, ಮೇ ೨: ಶ್ರೀ ಬಸವೇಶ್ವರ ದಂಡಿನಮ್ಮ ದೇವಾಲಯ ಸಮಿತಿ ವತಿಯಿಂದ ವಾರ್ಷಿಕ ಹಬ್ಬದ ಅಂಗವಾಗಿ ದಂಡಿನಮ್ಮ ದೇವಾಲಯದಲ್ಲಿ ಸರಳವಾಗಿ ಪೂಜಾ ಕಾರ್ಯಕ್ರಮ ನಡೆಯಿತು.

ಈ ಸಂದರ್ಭ ದೇವಾಲಯ ಸಮಿತಿಯ ಅಧ್ಯಕ್ಷ ಕೆ.ಕೆ. ಭೀಮಣ್ಣ, ಕಾರ್ಯದರ್ಶಿ ಕೆ.ಎಸ್. ಚಂದ್ರಶೇಖರ ಸೇರಿದಂತೆ ಸಮಿತಿಯ ನಿರ್ದೇಶಕರು ಹಾಜರಿದ್ದರು.