ಮಡಿಕೇರಿ, ಮೇ ೩: ಕೊಡಗು ಜಿಲ್ಲೆಯ ಪ್ರವಾಸೋದ್ಯಮ ವಲಯವನ್ನು ಮೇ ೧೫ರವರೆಗೆ ಸ್ಥಗಿತಗೊಳಿಸುವ ಮೂಲಕ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ತಡೆಗೆ ಸಹಕಾರ ನೀಡಲು ಹೊಟೇಲ್, ರೆಸಾರ್ಟ್ ಮತ್ತು ರೆಸ್ಟೋರೆಂಟ್ ಅಸೋಸಿಯೇಷನ್ ಹಾಗೂ ಕೊಡಗು ಹೋಂ ಸ್ಟೇ ಅಸೋಸಿಯೇಷನ್ ನಿರ್ಧರಿಸಿವೆ.

ಈ ಬಗ್ಗೆ ಜಂಟಿ ಹೇಳಿಕೆಯಲ್ಲಿ ಮಾಹಿತಿ ನೀಡಿರುವ ಜಿಲ್ಲಾ ಹೊಟೇಲ್, ರೆಸಾರ್ಟ್, ರೆಸ್ಟೋರೆಂಟ್ ಅಸೋಸಿಯೇಷನ್ ಅಧ್ಯಕ್ಷ ಬಿ. ಆರ್.ನಾಗೇಂದ್ರ ಪ್ರಸಾದ್ ಮತ್ತು ಹೋಂಸ್ಟೇ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಬಿ.ಜಿ. ಅನಂತಶಯನ, ಎರಡನೇ ಅಲೆ ಸಂದರ್ಭ ಜಿಲ್ಲೆಯಲ್ಲಿಯೂ ಪ್ರಕರಣಗಳು ಹೆಚ್ಚಾಗುತ್ತಿವೆ, ಈ ನಿಟ್ಟಿನಲ್ಲಿ ಜಿಲ್ಲಾಡಳಿತಕ್ಕೆ ಸಹಕಾರ ನೀಡಿ ಜನಸಂದಣಿಯನ್ನು ಇಂದಿನ ದಿನಗಳಲ್ಲಿ ತಡೆಗಟ್ಟುವ ನಿಟ್ಟಿನಲ್ಲಿ ಈ ಸಾಮಾಜಿಕ ಹೊಣೆಗಾರಿಕೆಯಾಗಿ,ಕೊಡಗು ಜಿಲ್ಲೆಯ ಎಲ್ಲಾ ಹೊಟೇಲ್, ರೆಸಾರ್ಟ್, ಲಾಡ್ಜ್ ಹೋಂಸ್ಟೇಗಳನ್ನು ೧೫ರವರೆಗೆ ಮುಚ್ಚಲಾಗುತ್ತಿದೆ. ಪ್ರವಾಸಿಗರು ಹಾಗೂ ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದ್ದಾರೆ.