ಮಡಿಕೇರಿ, ಮೇ. ೩: ಕೊಡಗು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕೊರೊನಾ ಸೋಂಕು ತಡೆಗೆ ಜಿಲ್ಲಾಡಳಿತ ಬಿಗಿ ಕ್ರಮದ ಮೊರೆ ಹೋಗಿದ್ದು, ಮುಂದಿನ ೨ ವಾರಗಳ ಕಾಲ ಮಂಗಳವಾರ, ಶುಕ್ರವಾರ ಹೊರತುಪಡಿಸಿದಂತೆ ಬಾಕಿ ದಿನ ವ್ಯಾಪಾರ ವಹಿವಾಟು, ತುರ್ತು ಸೇವೆಗಳನ್ನು ಹೊರತುಪಡಿಸಿ ಜಿಲ್ಲೆ ಸಂಪೂರ್ಣ ಸ್ತಬ್ಧ ಆಗಲಿವೆೆ.ಈ ಸಂಬAಧ ನಗರದ ಜಿಲ್ಲಾಡಳಿತ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು, ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದೆ. ಪರಿಸ್ಥಿತಿ ಕೈಮೀರಿ ಹೋಗಿದೆ. ಈಗಾಗಲೇ ರಾಜ್ಯ ಸರಕಾರ ಕೋವಿಡ್ ಸಂಬAಧ ಮಾರ್ಗಸೂಚಿ ಪ್ರಕಟಿಸಿದೆ. ಆದರೆ, ಕೊಡಗು ಜಿಲ್ಲೆಯಲ್ಲಿ ಪರಿಸ್ಥಿತಿ ಹತೋಟಿಗೆ ಬಾರದ ಹಿನ್ನೆಲೆ ಉಸ್ತುವಾರಿ ಸಚಿವರು, ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ೨ ವಾರಗಳ ಕಾಲ ಬಿಗಿ ಕ್ರಮ ಕೊಡಗು ಜಿಲ್ಲೆಯಲ್ಲಿ ಜಾರಿ ಇರಲಿದೆ ಎಂದು ತಿಳಿಸಿದರು.

೬ ರಿಂದ ೧೨ ಗಂಟೆಯ ತನಕ ಅನುಮತಿಮುಂದಿನ ೨ ವಾರಗಳಲ್ಲಿ ಮಂಗಳವಾರ ಹಾಗೂ ಶುಕ್ರವಾರ ಬೆಳಿಗ್ಗೆ ೬ ರಿಂದ ೧೨ ಗಂಟೆಯ ತನಕ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ನಿಗದಿತ ಅವಧಿಯಲ್ಲಿ ದಿನಸಿ, ತರಕಾರಿ, ಹಣ್ಣು, ಹಂಪಲು, ಮದ್ಯದ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗಿದೆ.

ದಿನನಿತ್ಯ ಬೆಳಿಗ್ಗೆ ೬ ರಿಂದ ೧೦ರ ತನಕ ಪತ್ರಿಕೆ ಮತ್ತು ಹಾಲು ಮಾರಾಟಕ್ಕೆ ವಿನಾಯಿತಿ ಇದೆ. ಹೊಟೇಲ್‌ನಲ್ಲಿ ಪಾರ್ಸಲ್ ವ್ಯವಸ್ಥೆ ಮಂಗಳವಾರ ಮತ್ತು ಶುಕ್ರವಾರ ಮಾತ್ರ ಇರಲಿವೆ. ಕಟ್ಟಡ ಕೆಲಸಗಳು ಹಳೆ ಮಾರ್ಗಸೂಚಿಯಂತೆ ಮುಂದುವರೆಯಲಿದೆ. ಈ ಬಾರಿ ಕೃಷಿ ಸಂಬAಧಿತ ವ್ಯಾಪಾರಗಳು ೨ ದಿನ ಮಾತ್ರ ಇರಲಿವೆ. ಪೆಟ್ರೋಲ್ ಬಂಕ್, ಮೆಡಿಕಲ್ ಶಾಪ್, ತುರ್ತು ಸೇವೆಗಳು ಎಂದಿನAತೆ ನಿತ್ಯ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದರು.

ಪೂರ್ವನಿಗದಿತ ಮದುವೆ, ಶುಭ ಸಮಾರಂಭಗಳು ಮಾರ್ಗಸೂಚಿ ಅನ್ವಯ ನಡೆಸಬೇಕು.

(ಮೊದಲ ಪುಟದಿಂದ) ಅಂಗಡಿ ತೆರೆಯುವ ವಿಚಾರ ಹೊರತುಪಡಿಸಿದಂತೆ ಉಳಿದೆಲ್ಲ ನಿಯಮಗಳು ರಾಜ್ಯ ಸರಕಾರದ ಮಾರ್ಗಸೂಚಿಯಂತೆ ಇರಲಿದೆ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು.

ಬಿಗಿ ಕ್ರಮದ ವಿವರ

ಅತ್ಯವಶ್ಯಕ ಸೇವೆಗಳಡಿ ಬರುವ ತರಕಾರಿ, ಹಣ್ಣು ಹಂಪಲು, ದಿನಸಿ, ಕೃಷಿ ಚಟುವಟಿಕೆಗಳಿಗೆ, ಮುಂಗಾರು ಪೂರ್ವ ಚಟುವಟಿಕೆಗೆ ಸಂಬAಧಿಸಿದ ಅಂಗಡಿ ಮಳಿಗೆ ಮತ್ತು ದಾಸ್ತನು ಕೇಂದ್ರಗಳು, ಮೀನು, ಮಾಂಸದ ಮಳಿಗೆಗಳನ್ನು, ಪಡಿತರ ನ್ಯಾಯಬೆಲೆ ಮಳಿಗೆಗಳು ಮಂಗಳವಾರ ಹಾಗೂ ಶುಕ್ರವಾರ ಬೆಳಿಗ್ಗೆ ೬ ರಿಂದ ೧೨ ಗಂಟೆಯ ತನಕ ತೆರೆಯಲು ಅನುಮತಿಸಲಾಗಿದೆ.

ಸ್ಟಾಂಡ್ ಅಲೋನ್ ಹಾಲಿನ ಬೂತ್, ದಿನಪತ್ರಿಕೆ ಸೆಗ್ರಿಗೇಷನ್ ಮತ್ತು ವಿತರಣೆಗೆ ದಿನನಿತ್ಯ ಬೆಳಿಗ್ಗೆ ೬ ಗಂಟೆಯಿAದ ೧೦ ಗಂಟೆಯ ತನಕ ಅವಕಾಶ ಕಲ್ಪಿಸಲಾಗಿದೆ.

ಆಸ್ಪತ್ರೆ, ಔಷಧಾಲಯ, ವೈದ್ಯಕೀಯ ಸೇವೆಗಳು, ಪೆಟ್ರೋಲ್ ಬಂಕ್‌ಗಳು, ಎಲ್‌ಪಿಜಿ ಕೇಂದ್ರಗಳು ೨೪x೭ ಕಾರ್ಯಾಚಟುವಟಿಕೆ ಅನುಮತಿಸಲಾಗಿದೆ.

ಮಂಗಳವಾರ ಮತ್ತು ಶುಕ್ರವಾರ ಬೆಳಿಗ್ಗೆ ೬ ರಿಂದ ೧೨ ಗಂಟೆ ತನಕ ಹೊಟೇಲ್‌ನಲ್ಲಿ ಊಟ, ಬಾರ್‌ನಲ್ಲಿ ಮದ್ಯ ಪಾರ್ಸಲ್‌ಗೆ ಮಾತ್ರ ಅವಕಾಶವಿದೆ. ಶುಕ್ರವಾರ ರಾತ್ರಿ ೯ ಗಂಟೆಯಿAದ ಸೋಮವಾರ ಬೆಳಿಗ್ಗೆ ೬ ಗಂಟೆಯ ತನಕ ವಾರಾಂತ್ಯ ಕರ್ಫ್ಯೂ ಜಾರಿ ಇರಲಿದೆ.

ಜಿಲ್ಲೆಗೆ ಆಗಮಿಸುವವರನ್ನು ಪ್ರತಿ ಚೆಕ್‌ಪೋಸ್ಟ್ಗಳಲ್ಲಿ ವಿಚಾರಣೆ ನಡೆಸಿ, ಕೊಡಗು ಜಿಲ್ಲೆಯಲ್ಲಿ ವಾಸ್ತವ್ಯ ಹೂಡುವುದಾದರೆ ಎಲ್ಲಿ ತಂಗುತ್ತಾರೆ ಎಂಬ ಬಗ್ಗೆ ಪೂರ್ಣ ವಿಳಾಸ ಪಡೆದು, ಹೊರ ಜಿಲ್ಲೆಯಿಂದ ಆಗಮಿಸಿದವರು ಕಡ್ಡಾಯವಾಗಿ ೧೦ ದಿನಗಳ ಕಾಲ ಹೋಂ ಕ್ವಾರಂಟೈನ್‌ನಲ್ಲಿ ಇರತಕ್ಕದ್ದು.

ಸರಕಾರಿ ನೌಕರರು, ಕೋವಿಡ್ ಸಂಬAಧಿಯ ಕಾರ್ಯದಲ್ಲಿ ತೊಡಗಿರುವ ಅಧಿಕಾರಿಗಳ ಸಂಚಾರಕ್ಕೆ ಅವಕಾಶವಿರುತ್ತದೆ. ಜಿಲ್ಲೆಯಾದ್ಯಂತ ಯಾವುದೇ ವ್ಯಕ್ತಿಗಳು ಸಕಾರಣವಿಲ್ಲದೆ ಅನಗತ್ಯ ಸಂಚರಿಸುವುದು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಆದೇಶಿಸಿದ್ದಾರೆ.

ಆಕ್ಸಿಜನ್ ಕೊರತೆ ಇಲ್ಲ

ಜಿಲ್ಲೆಯಲ್ಲಿ ಸಮರ್ಪಕ ಆಕ್ಸಿಜನ್ ವ್ಯವಸ್ಥೆ ಇದೆ. ಕೋವಿಡ್ ಆಸ್ಪತ್ರೆಯಲ್ಲಿರುವ ಆಕ್ಸಿಜನ್ ಪ್ಲಾö್ಯಂಟ್ ಮೂಲಕ ಅವಶ್ಯವಿರುವವರಿಗೆ ಪ್ರಾಣವಾಯು ಪೂರೈಸಲಾಗುತ್ತದೆ. ಪ್ಲಾö್ಯಂಟ್‌ನಲ್ಲಿ ಆಕ್ಸಿಜನ್ ಖಾಲಿಯಾದ ತಕ್ಷಣ ಆಕ್ಸಿಜನ್ ಸಿಲಿಂಡರ್‌ಗಳನ್ನು ಬೆಂಗಳೂರಿನಿAದ ತರಿಸಿ ತುಂಬಿಸಿಕೊಳ್ಳಲಾಗುತ್ತದೆ. ಆಕ್ಸಿಜನ್ ಸಿಲಿಂಡರ್‌ಗಳನ್ನು ಮೈಸೂರಿನಿಂದ ತರಿಸಿಕೊಳ್ಳಲಾಗುತ್ತದೆ. ಸದ್ಯಕ್ಕೆ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ಇಲ್ಲ. ಜೊತೆಗೆ ಇತರ ಜಿಲ್ಲೆಯ ಜಿಲ್ಲಾಡಳಿತದೊಂದಿಗೆ ಸಮನ್ವಯತೆ ಸಾಧಿಸಿದ್ದು, ಅವಶ್ಯಕತೆ ಇದ್ದಲ್ಲಿ ಅಲ್ಲಿಂದ ಸಹಾಯ ಪಡೆದುಕೊಳ್ಳುತ್ತೇವೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದರು.

ಸೋಂಕು ಹರಡುವಿಕೆ ವೇಗ ಹೆಚ್ಚಿದೆ

ಸೋಂಕು ಹರಡುವಿಕೆಯ ವೇಗ ಹೆಚ್ಚಾಗಿರುವುದು, ಪ್ರಾಥಮಿಕ ಸಂಪರ್ಕಿತರಲ್ಲಿ ಸೋಂಕು ದೃಢಪಡುತ್ತಿರುವುದು, ಅಂರ‍್ರಾಜ್ಯ ಸಂಚಾರ ಇದ್ದ ಹಿನ್ನೆಲೆ ಕೊರೊನಾ ಸೋಂಕು ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಲು ಕಾರಣವಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ನಗರ ಪ್ರದೇಶದಲ್ಲಿ ಸೋಂಕು ಹರಡುವಿಕೆ ಹೆಚ್ಚಿದೆ. ಜಿಲ್ಲೆಯ ಜನ ಅಗತ್ಯ ಎಚ್ಚರಿಕೆ ವಹಿಸಬೇಕು. ಮಾಸ್ಕ್ ಧರಿಸುವುದರೊಂದಿಗೆ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಮನವಿ ಮಾಡಿದರು.

ಬೇರೆ ಜಿಲ್ಲೆ, ರಾಜ್ಯಗಳಿಂದ ಬರುವವರು ಕಡ್ಡಾಯವಾಗಿ ಸ್ವಯಂ ಸಂಪರ್ಕ ತಡೆಯಲ್ಲಿರಬೇಕು. ಅಂತವರಿಗೆ ಸೀಲ್ ಮಾಡಲು ಕ್ರಮಕೈಗೊಳ್ಳಲಾಗುತ್ತದೆ ಎಂದರು. ಗೋಷ್ಠಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮೋಹನ್ ಇದ್ದರು.

ಚೇಂಬರ್‌ನಿAದಲೂ ಮನವಿ

ಕೊಡಗು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ವತಿಯಿಂದ ಅಧ್ಯಕ್ಷ ಎಂ.ಬಿ ದೇವಯ್ಯ ವ್ಯಾಪಾರ ದಿನ ಮತ್ತು ಸಮಯ ಕಡಿತಗೊಳಿಸಲು ಮನವಿ ಸಲ್ಲಿಸಿದ್ದರು.

ವಾರದಲ್ಲಿ ಮೂರು ದಿನ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಬೇಕೆಂದು ಉಸ್ತುವಾರಿ ಸಚಿವ ವಿ.ಸೋಮಣ್ಣ ಸೇರಿದಂತೆ ಇನ್ನಿತರ ಜನಪ್ರತಿನಿಧಿಗಳಿಗೆ ಲಿಖಿತ ಮನವಿ ಸಲ್ಲಿಸಲಾಗಿತ್ತು.