ಮಡಿಕೇರಿ, ಮೇ. ೩: ವೀರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕಿನಲ್ಲಿ ಕೋವಿಡ್ ೧೯ ಪಾಸಿಟಿವ್ ಪ್ರಕರಣಗಳು ಲಾಕ್‌ಡೌನ್ ಸಂದರ್ಭದಲ್ಲಿಯೂ ಹೆಚ್ಚಾಗುತ್ತಿರುವ ಹಿನ್ನೆಲೆ ಶಾಸಕ ಕೆ.ಜಿ.ಬೋಪಯ್ಯ ಅವರ ಅಧ್ಯಕ್ಷತೆಯಲ್ಲಿ ವೀರಾಜಪೇಟೆ ತಾಲೂಕು ತಹಶೀಲ್ದಾರರ ಕಚೇರಿಯಲ್ಲಿ ಸಭೆ ನಡೆಯಿತು.
ತಾಲೂಕು ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದAತೆ ಗಮನಹರಿಸಬೇಕು. ಕೋವಿಡ್ ಆಸ್ಪತ್ರೆಯಲ್ಲಿ ಅಗತ್ಯ ಹಾಸಿಗೆ ಹಾಗೂ ಆಮ್ಲಜನಕ ಇರಬೇಕು ಎಂದು ಕೆ.ಜಿ.ಬೋಪಯ್ಯ ಅವರು ನಿರ್ದೇಶನ ನೀಡಿದ್ದಾರೆ.
ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಕೋವಿಡ್ ೧೯ ಸೋಂಕಿತರಿಗೆ ಅಗತ್ಯ ಔಷಧಿ ಸೇರಿದಂತೆ ಅಗತ್ಯ ಆರೋಗ್ಯ ಸೇವೆ ಕಲ್ಪಿಸಬೇಕು, ಯಾವುದೇ ಕಾರಣಕ್ಕೂ ಲೋಪಗಳು ಕಂಡುಬರದAತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಶಾಸಕರು ಸೂಚಿಸಿದರು.
ಸಭೆಯಲ್ಲಿ ತಹಶೀಲ್ದಾರ್ ಆರ್.ಯೋಗಾನಂದ, ತಾಲೂಕು ವೈದ್ಯಾಧಿಕಾರಿ ಡಾ.ಯತಿರಾಜ್, ಡಾ.ವಿಶ್ವನಾಥ ಸಿಂಪಿ, ಡಿವೈಎಸ್‌ಪಿ ಜಯಕುಮಾರ್, ತಾ.ಪಂ.ಇಒ ಅಪ್ಪಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ವನಜಾಕ್ಷಿ ನೋಡಲ್ ಅಧಿಕಾರಿಗಳಾದ ಸಿ.ಶಿವಕುಮಾರ್, ಹೇಮಂತ್ ಕುಮಾರ್, ಇತರರು ಇದ್ದರು.