ಮಡಿಕೇರಿ, ಮೇ ೪: ಕಾರ್ಮಿಕ ಇಲಾಖೆ ವತಿಯಿಂದ ಮಡಿಕೇರಿ ನಗರದಲ್ಲಿ ಮತ್ತು ಗಾಳಿಬೀಡು ಹತ್ತಿರವಿರುವ ಕಾರ್ಮಿಕರ ಶೆಡ್ಗಳಿಗೆ ಭೇಟಿ ನೀಡಿ ಕೋವಿಡ್-೧೯ರ ೨ನೇ ಅಲೆಯ ಕುರಿತು ತಿಳುವಳಿಕೆ ನೀಡಲಾಯಿತು.
ಕಡ್ಡಾಯವಾಗಿ ಮಾಸ್ಕ್ ಧರಿಸಿ ಅಂತರ ಕಾಯ್ದುಕೊಂಡು ಸುರಕ್ಷಿತವಾಗಿ ಕೆಲಸ ಮಾಡುವಂತೆ, ವಲಸೆ ಕಾರ್ಮಿಕರ ಮಾಹಿತಿಯನ್ನು ನಮೂನೆ-ಬಿಯಲ್ಲಿ ತಯಾರಿಸಿ ಸಲ್ಲಿಸಲು ಗುತ್ತಿಗೆದಾರರಿಗೆ ತಿಳಿಸಲಾಯಿತು. ವಲಸೆ ಕಾರ್ಮಿಕರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ನೋಡಿಕೊಂಡು ಕೇಂದ್ರ ಸರ್ಕಾರದ, ರಾಜ್ಯ ಸರ್ಕಾರದ ಮತ್ತು ಜಿಲ್ಲಾಧಿಕಾರಿಗಳು ಆಗಿಂದಾಗ್ಗೆ ಹೊರಡಿಸುವ ಕೋವಿಡ್-೧೯ಕ್ಕೆ ಸಂಬAಧಿಸಿದ ಆದೇಶ, ಸುತ್ತೋಲೆ ಮತ್ತು ಮಾರ್ಗಸೂಚಿಗಳನ್ನು ಪಾಲಿಸುವಂತೆ ತಿಳುವಳಿಕೆ ನೀಡಲಾಯಿತು. ಕಾರ್ಮಿಕರ ಕುಂದುಕೊರತೆಗಳನ್ನು ವಿಚಾರಿಸಲಾಯಿತು.
ಗಾಳಿಬೀಡಿಗೆ ಭೇಟಿ ನೀಡಿ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ತೋಟಗಳಲ್ಲಿ, ಕಟ್ಟಡ ಹಾಗೂ ಇತರ ನಿರ್ಮಾಣ ಕೆಲಸದಲ್ಲಿ ತೊಡಗಿರುವ ವಲಸೆ ಕಾರ್ಮಿಕರ ಮಾಹಿತಿಯನ್ನು ನಮೂನೆ-ಬಿಯಲ್ಲಿ ಪಡೆದು ಒದಗಿಸುವಂತೆ ಕೋರಲಾಯಿತು. ವಲಸೆ ಕಾರ್ಮಿಕರು ಬಂದುಹೋದರೆ ಅವರ ಮಾಹಿತಿಯನ್ನು ಕಳುಹಿಸುವಂತೆ ಹಿರಿಯ ಕಾರ್ಮಿಕ ನಿರೀಕ್ಷಕ ಎಂ.ಎA. ಯತ್ನಟ್ಟಿ ತಿಳಿಸಿದರು.