ಬೆAಗಳೂರು, ಮೇ ೪: ಕೋವಿಡ್ ಸೋಂಕಿನ ಪ್ರಸರಣದ ಹಿನ್ನೆಲೆ ತಾ. ೨೪ ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿ.ಯು.ಸಿ. ಪರೀಕ್ಷೆಗಳನ್ನು ಮುಂದೂಡ ಲಾಗಿದೆ ಎಂದು ತಿಳಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ಮುಂದಿನ ದಿನಗಳಲ್ಲಿ ಪರೀಕ್ಷೆಗಳ ದಿನಾಂಕಗಳನ್ನು ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.ಮಂಗಳವಾರ ವಿಧಾನಸೌಧದಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಮಾತನಾಡಿದ ಅವರು, ಪರೀಕ್ಷಾ ದಿನಾಂಕಗಳನ್ನು ಪರೀಕ್ಷೆಗಳು ಆರಂಭವಾಗುವುದಕ್ಕೆ ೧೫-೨೦ ದಿನಗಳ ಮುನ್ನವೇ ಪ್ರಕಟಿಸಲಾಗುವುದು ಎಂದರು.
ಈಗಾಗಲೇ ಪರೀಕ್ಷೆಗೆ ಸಜ್ಜಾಗಿದ್ದ ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿರುವುದರಿAದ ಯಾವುದೇ ಕಾರಣಕ್ಕೂ ವಿಚಲಿತರಾಗದೇ ಶ್ರದ್ಧೆಯಿಂದ ತಮ್ಮ ವಿದ್ಯಾಭ್ಯಾಸವನ್ನು ಎಂದಿನAತೆ ಮುಂದುವರೆಸಬೇಕೆAದು ಮನವಿ ಮಾಡಿದ್ದಾರೆ.
ಪ್ರಥಮ ಪಿ.ಯು.ಸಿ. ವಿದ್ಯಾರ್ಥಿಗಳು ತೇರ್ಗಡೆ
ದ್ವಿತೀಯ ಪಿ.ಯು.ಸಿ. ಪರೀಕ್ಷೆಗಳ ನಂತರ ನಡೆಸಬೇಕೆಂದು ನಿರ್ಧರಿಸಲಾಗಿದ್ದ ಪ್ರಥಮ ಪಿ.ಯು.ಸಿ. ಪರೀಕ್ಷೆಗಳನ್ನು ಕೋವಿಡ್ ಹಿನ್ನೆಲೆ ರದ್ದುಪಡಿಸಲಾಗಿದ್ದು, ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡುವ ನಿರ್ಧಾರವನ್ನೂ
ಇದೇ ಸಂದರ್ಭದಲ್ಲಿ ತೆಗೆದುಕೊಳ್ಳಲಾಗಿದೆ ಎಂದು ಸುರೇಶ್‌ಕುಮಾರ್ ತಿಳಿಸಿದ್ದಾರೆ.
ಈ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದ ಪ್ರಾರಂಭದ ಮುನ್ನ ಬ್ರಿಡ್ಜ್ ಕೋರ್ಸ್ಗಳನ್ನು ನಡೆಸಲಾಗುತ್ತದೆ. ಹಾಗೆಯೇ ಇಲಾಖೆಯ ಯೂ-ಟ್ಯೂಬ್ ಚಾನಲ್‌ಗಳ ಮೂಲಕ ಈಗಿನಿಂದಲೇ ಈ ಬ್ರಿಡ್ಜ್ ಕೋರ್ಸ್ಗಳು ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದರು.
ಉಪನ್ಯಾಸಕರಿಗೆ ವರ್ಕ್ ಫ್ರಂ ಹೋಂ
ಪರೀಕ್ಷೆಗಳನ್ನು ಮುಂದೂಡಿರುವ ಹಿನ್ನೆಲೆ ವಿದ್ಯಾರ್ಥಿಗಳೊಂದಿಗೆ ಸತತವಾಗಿ
(ಮೊದಲ ಪುಟದಿಂದ) ಸಂಪರ್ಕದಲ್ಲಿರುವAತೆ ಉಪನ್ಯಾಸಕರು ವರ್ಕ್ ಫ್ರಂ ಹೋಂ ಕೆಲಸ ಮಾಡಲು ಸೂಚಿಸಲಾಗಿದೆ.
ವಿದ್ಯಾರ್ಥಿಗಳೊಂದಿಗೆ ನಿರಂತರ ಸಂಪರ್ಕ, ಇಲಾಖೆಯ ಪಠ್ಯ ಬೋಧನಾ ಕ್ರಮಗಳನ್ನು ಅವರೊಂದಿಗೆ ಚರ್ಚಿಸುವುದು ಸೇರಿದಂತೆ ಎಲ್ಲ ಆಡಳಿತಾತ್ಮಕ ಕ್ರಮಗಳಿಗೆ ಅವರು ಸದಾ ಲಭ್ಯವಾಗಬೇಕಿದೆ. ಹಾಗೆಯೇ ಕೋವಿಡ್ ಕರ್ತವ್ಯಗಳಲ್ಲಿ ತೊಡಗಿಸಿಕೊಂಡಿರುವ ಉಪನ್ಯಾಸಕರು ತಮ್ಮ ಕೋವಿಡ್ ಜವಾಬ್ದಾರಿಗಳನ್ನು ಪೂರೈಸಬೇಕಿದೆ ಎಂದು ಸುರೇಶ್‌ಕುಮಾರ್ ತಿಳಿಸಿದರು.
ಮೇ ೨೪ ರಿಂದ ಜೂನ್ ೧೬ ರವರೆಗೆ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಗಳನ್ನು ನಡೆಸಲು ಈ ಮೊದಲು ನಿರ್ಧರಿಸಲಾಗಿತ್ತು. ರಾಜ್ಯಾದ್ಯಂತ ೧೦೪೭ ಕೇಂದ್ರಗಳಲ್ಲಿನ ೫೫೬೨ ಕಾಲೇಜುಗಳಲ್ಲಿ ಪರೀಕ್ಷೆಗಳನ್ನು ನಡೆಸಲು ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಲಾಗಿತ್ತು.
ಈ ಬಾರಿ ೫,೯೨,೮೧೬ ಹೊಸ ವಿದ್ಯಾರ್ಥಿಗಳು, ೭೬,೪೨೨ ಪುನರಾವರ್ತಿತ ಅಭ್ಯರ್ಥಿಗಳು ಹಾಗೂ ೧೭,೪೭೦ ಖಾಸಗಿ ಅಭ್ಯರ್ಥಿಗಳು ಸೇರಿ ೬೮,೬೭೦೮ ಅಭ್ಯರ್ಥಿಗಳು ಈ ಬಾರಿ ಪರೀಕ್ಷೆ ತೆಗೆದುಕೊಂಡಿದ್ದರು.