ಮಡಿಕೇರಿ, ಮೇ ೪: ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರು ತಾ. ೬ ರಂದು ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಬೆಳಿಗ್ಗೆ ೧೧ ಗಂಟೆಗೆ ವೀರಾಜಪೇಟೆ ತಾಲೂಕು ವ್ಯಾಪ್ತಿಯಲ್ಲಿ ತೆರೆದಿರುವ ಕೋವಿಡ್ ಕೇರ್ ಸೆಂಟರ್‌ಗಳಿಗೆ ಭೇಟಿ ನೀಡಲಿದ್ದಾರೆ. ಹಾಗೆಯೇ ತಾಲೂಕಿನಲ್ಲಿ ಕೋವಿಡ್-೧೯ ಸೋಂಕು ನಿಯಂತ್ರಣ ಮತ್ತು ಸೋಂಕಿತರ ಚಿಕಿತ್ಸೆ ಸಂಬAಧಿಸಿದAತೆ ಕೈಗೊಂಡ ಮುಂಜಾಗ್ರತಾ ಕ್ರಮಗಳ ಕುರಿತು ಸಂಬAಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಲಿದ್ದಾರೆ.
ಬಳಿಕ ಮಧ್ಯಾಹ್ನ ೧ ಗಂಟೆಗೆ ಮಡಿಕೇರಿಗೆ ಆಗಮಿಸಿ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಕೋವಿಡ್-೧೯ ಸೋಂಕು ನಿಯಂತ್ರಣ ಮತ್ತು ಸೋಂಕಿತರ ಚಿಕಿತ್ಸೆ ಸಂಬAಧಿಸಿದAತೆ ಕೈಗೊಂಡ ಮುಂಜಾಗ್ರತಾ ಕ್ರಮಗಳ ಕುರಿತು ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾಧಿಕಾರಿ ಹಾಗೂ ಸಂಬAಧಪಟ್ಟ ಅಧಿಕಾರಿಗಳ ಜೊತೆ ಪರಿಶೀಲನಾ ಸಭೆ ನಡೆಸಲಿದ್ದಾರೆ.
ನಂತರ ಮಧ್ಯಾಹ್ನ ೩.೩೦ ಗಂಟೆಗೆ ಸೋಮವಾರಪೇಟೆ ತಾಲೂಕು ವ್ಯಾಪ್ತಿಯಲ್ಲಿ ತೆರೆದಿರುವ ಡೆಡಿಕೇಟೆಡ್ ಕೋವಿಡ್ ಹೆಲ್ತ್ ಸೆಂಟರ್‌ಗೆ ಭೇಟಿ ಹಾಗೂ ತಾಲೂಕಿನಲ್ಲಿ ಕೋವಿಡ್-೧೯ ಸೋಂಕು ನಿಯಂತ್ರಣ ಮತ್ತು ಸೋಂಕಿತರ ಚಿಕಿತ್ಸೆ ಸಂಬAಧಿಸಿದAತೆ ಕೈಗೊಂಡ ಮುಂಜಾಗ್ರತಾ ಕ್ರಮಗಳ ಕುರಿತು ಸಂಬAಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿ ಎಸ್.ಬಿ. ನರೇಂದ್ರ ತಿಳಿಸಿದ್ದಾರೆ.