ಕೋವಿಡ್ ಸಂಬAಧಿತ ಹೊಣೆಗಾರಿಕೆ ಸಚಿವರಿಗೆ-ಮುಖ್ಯಮಂತ್ರಿ

ಬೆAಗಳೂರು, ಮೇ ೪: ಪತ್ರಕರ್ತರನ್ನು ಮುಂಚೂಣಿ ಕಾರ್ಯಕರ್ತರಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿನ ಕೋವಿಡ್-೧೯ ಪರಿಸ್ಥಿತಿ ಮತ್ತು ಆಕ್ಸಿಜನ್ ಸರಬರಾಜು ಕುರಿತಂತೆ ಸಚಿವ ಸಂಪುಟ ಸಭೆ ನಡೆಸಿದ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಗಳಲ್ಲಿ ಕೋವಿಡ್ ಸಂಬAಧಿತ ಸಮಸ್ಯೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವರೇ ಸರಿಪಡಿಸಬೇಕು. ಮೆಡಿಕಲ್ ಆಕ್ಸಿಜನ್ ಸರÀಬರಾಜು ವ್ಯವಸ್ಥೆಯ ಜವಾಬ್ದಾರಿಯನ್ನು ಸಚಿವ ಜಗದೀಶ್ ಶೆಟ್ಟರ್ ಅವರಿಗೆ ವಹಿಸಲಾಗಿದೆ. ರೆಮ್‌ಡೆಸಿವರ್ ಪೂರೈಕೆ ನಿರ್ವಹಣೆ ಜವಾಬ್ದಾರಿಯನ್ನು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಆಶ್ವತ್ಥನಾರಾಯಣ ಅವರು ವಹಿಸಿಕೊಳ್ಳಲಿದ್ದಾರೆ. ಆಸ್ಪತ್ರೆಗಳಲ್ಲಿನ ಬೆಡ್‌ಗಳ ಹೊಣೆಗಾರಿಕೆಯನ್ನು ಸಚಿವ ಆರ್. ಅಶೋಕ್ ನೋಡಿಕೊಳ್ಳಲಿದ್ದಾರೆ. ಹಾಗೆಯೇ, ಅರಣ್ಯ ಸಚಿವ ಅರವಿಂದ್ ಲಿಂಬಾವಳಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೂ ಕೆಲ ಜವಾಬ್ದಾರಿ ಹೊರಿಸಲಾಗಿದೆ ಎಂದು ಹೇಳಿದರು. ಚಾಮರಾಜನಗರದ ಘಟನೆ ಬಗ್ಗೆ ತೀವ್ರ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಹೇಳಿದ ಸಿಎಂ ಬಿ.ಎಸ್. ಯಡಿಯೂರಪ್ಪ, ದುರಂತದ ಬಗ್ಗೆ ೩ ದಿನದಲ್ಲಿ ವರದಿ ನೀಡಲು ಸೂಚಿಸಿದ್ದೇನೆ. ಮಹಾರಾಷ್ಟçದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆ ಆಗುತ್ತಿದೆ. ಹಾಗಾಗಿ ಜಿಂದಾಲ್ ಕಂಪೆನಿ ಉತ್ಪಾದಿಸುವ ಮೆಡಿಕಲ್ ಆಕ್ಸಿಜನ್‌ನ್ನು ನಾವೇ ಬಳಸಿಕೊಳ್ಳುತ್ತೇವೆ. ಈ ಕುರಿತು ಕೇಂದ್ರಕ್ಕೆ ಮನವಿ ಮಾಡುತ್ತೇವೆ. ಸಂಸದ ತೇಜಸ್ವಿ ಸೂರ್ಯ ಹಾಸಿಗೆ ಬ್ಲಾಕಿಂಗ್ ಮಾಡುವ ದಂಧೆ ಬಯಲಿಗೆಳೆದಿದ್ದಾರೆ. ಈ ಅವ್ಯವಹಾರದ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ. ಬೆಡ್ ಬ್ಲಾಕಿಂಗ್‌ನಲ್ಲಿ ಯಾರೇ ಭಾಗಿಯಾಗಿದ್ರೂ ಕ್ರಮ ಕೈಗೊಳ್ಳುತ್ತೇವೆ. ಈ ಕುರಿತು ಅಧಿಕಾರಿಗಳ ಜೊತೆ ಸಭೆ ಮಾಡುತ್ತೇನೆ ಎಂದು ಸಿಎಂ ಯಡಿ ಯೂರಪ್ಪ ವಿವರಿಸಿದರು. ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕನ್ನು ನಿಯಂತ್ರಣಗೊಳಿಸುವ ಸಲುವಾಗಿ ಕ್ರಮ ಕೈಗೊಳ್ಳಲಾಗುತ್ತಿದೆ. ಆಯಾ ಜಿಲ್ಲೆಗಳ ಉಸ್ತುವಾರಿ ಸಚಿವರ ಹೆಗಲಿಗೆ ಈ ಹೊಣೆ ನೀಡಲಾಗಿದೆ. ನಾಳೆಯಿಂದಲೇ ಜಿಲ್ಲಾ ಉಸ್ತುವಾರಿ ಸಚಿವರು ಅವರ ಜಿಲ್ಲೆಗಳಿಗೆ ಹೋಗಬೇಕು. ಅಲ್ಲಿಯೇ ಇದ್ದು ಪರಿಸ್ಥಿತಿ ನಿಭಾಯಿಸಬೇಕು. ಈ ಬಗ್ಗೆ ಸಭೆಯಲ್ಲಿ ಸೂಚಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಬೆಡ್ ಬುಕ್ಕಿಂಗ್ ಅವ್ಯವಹಾರ ಬಯಲಿಗೆಳೆದ ತೇಜಸ್ವಿ ಸೂರ್ಯ

ಬೆಂಗಳೂರು, ಮೇ. ೪: ಕೊರೊನಾ ಕಾಲದಲ್ಲೂ ಜನರ ಜೀವದ ಜೊತೆ ಆಟವಾಡುತ್ತಿರುವ, ಅಕ್ರಮವಾಗಿ ಬೆಡ್ ಬುಕ್ಕಿಂಗ್ ಮಾಡುತ್ತಿದ್ದ ಮಾಫಿಯಾವನ್ನು ಸಂಸದ ತೇಜಸ್ವಿ ಸೂರ್ಯ ಬಹಿರಂಗಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಸಂಸದ ತೇಜಸ್ವಿ ಸೂರ್ಯ, ಅಕ್ರಮವಾಗಿ ಬಿಬಿಎಂಪಿ ಬೆಡ್‌ಗಳು ಅಕ್ರಮವಾಗಿ ಬುಕ್ ಆಗುತ್ತಿರುವುದನ್ನು ಬಹಿರಂಗಪಡಿಸಿದ್ದು, ಇದರಲ್ಲಿ ಶಾಮೀಲಾಗಿರುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ವಾರ್‌ರೂಮ್‌ಗಳಿಂದಲೇ ಈ ವರೆಗೂ ಪ್ರಭಾವಿಗಳಿಂದ ೪,೦೬೫ ಬೆಡ್‌ಗಳನ್ನು ಬುಕ್ ಮಾಡಿದ್ದಾರೆ. ಬಿಬಿಎಂಪಿ ಬೆಡ್ ಬುಕ್ಕಿಂಗ್ ವೆಬ್‌ಸೈಟ್‌ಗಳಲ್ಲಿ ಬೆಡ್‌ಗಳು ಭರ್ತಿಯಾಗಿರುವುದು ತೋರಿಸುತ್ತಿದೆ. ಆದರೆ ಬೆಡ್ ಅಗತ್ಯವಿಲ್ಲದೇ ಇರುವ ಮನೆಯಲ್ಲಿಯೇ ಐಸೊಲೇಷನ್ ಆಗಿರುವವರ, ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿರುವವರ ಹೆಸರಿನಲ್ಲಿ ಹಣ ಪಡೆದು ತಮಗೆ ಬೇಕಾಗಿರುವವರಿಗೆ ಅಕ್ರಮವಾಗಿ ಬೆಡ್ ಬುಕ್ ಮಾಡುತ್ತಿರುವ ಮಾಫಿಯಾವನ್ನು ತೇಜಸ್ವಿ ಸೂರ್ಯ ಸಾಕ್ಷ್ಯ ಸಮೇತವಾಗಿ ಬಹಿರಂಗಗೊಳಿಸಿದ್ದಾರೆ. ತನಿಖೆ ನಡೆಸಿದಾಗ ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಮಿತ್ರ ಸಿಬ್ಬಂದಿ ಬಿಬಿಎಂಪಿ ಹೆಲ್ಪ್ಲೈನ್ ಹಾಗೂ ಬೆಡ್ ಹಂಚಿಕೆಗೆ ನಿಯುಕ್ತರಾಗಿರುವ ಸಿಬ್ಬಂದಿಗಳು ಕೆಲವು ಖಾಸಗಿ ಆಸ್ಪತ್ರೆಗಳು ಸೇರಿ ಕೃತಕ ಬೆಡ್ ಅಭಾವ ಸೃಷ್ಟಿಸಿ ಸಾರ್ವಜನಿಕರ ಜೀವಗಳ ಜೊತೆ ಚೆಲ್ಲಾಟ ಆಡುತ್ತಿರುವುದು ಕಂಡುಬAಡಿದೆ. ಕೋವಿಡ್-೧೯ನ ಯಾವುದೇ ಗುಣಲಕ್ಷಣಗಳನ್ನು ಹೊಂದಿರದ ಸೋಂಕಿತರ ಹೆಸರಿನಲ್ಲಿ ಬಿಬಿಎಂಪಿ ಉಸ್ತುವಾರಿ ಹೊಂದಿರುವ ಸಿಬ್ಬಂದಿ ಬೆಡ್ ನೋಂದಣಿಗೊಳಿಸಿ, ಕೆಲವೇ ಕ್ಷಣಗಳ ನಂತರ ಅದೇ ಬೆಡ್‌ನ್ನು ಹಣಕ್ಕೆ ಮತ್ತೊಬ್ಬರ ಹೆಸರಿನಲ್ಲಿ ನೋಂದಣಿಗೊಳಿಸುತ್ತಾರೆ. ನಿಜವಾಗಿಯೂ ಅವಶ್ಯಕತೆ ಇರುವ ರೋಗಿಗಳು ಆಸ್ಪತ್ರೆಯಿಂದ ಆಸ್ಪತ್ರೆಗೆ ಬೆಡ್ ಸಲುವಾಗಿ ಅಲೆದಾಡುತ್ತಿದ್ದರೆ, ಕೆಲವೇ ಕೆಲವರು ಅಕ್ರಮವಾಗಿ ಬೆಡ್‌ಗಳನ್ನು ದುಡ್ಡಿಗೆ ಹಂಚಿಕೆ ಮಾಡುತ್ತಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ ಬೆಡ್‌ಗಳ ಕೃತಕ ಅಭಾವ ಸೃಷ್ಟಿಯನ್ನು ವಿವರಿಸಿದ್ದಾರೆ. ಹಣ ನೀಡಿ ಬೆಡ್ ಪಡೆದವರು ತಮಗೆ ಯಾವುದೇ ಭಯವಿಲ್ಲದೇ ಮಾಹಿತಿ ನೀಡಬೇಕು, ಮಾಹಿತಿ ನೀಡಿದವರ ಗೌಪ್ಯತೆಯನ್ನು ಕಾಪಾಡಲಾಗುವುದು ಎಂದು ತೇಜಸ್ವಿ ಸೂರ್ಯ ಭರವಸೆ ನೀಡಿದ್ದಾರೆ.

ಶಾಸಕಾಂಗ ಪಕ್ಷದ ನಾಯಕರಾಗಿ ಸ್ಟಾಲಿನ್ ಆಯ್ಕೆ

ಚೆನ್ನೆöÊ, ಮೇ ೪: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ ಅಭೂತಪೂರ್ವ ಗೆಲುವು ದಾಖಲಿಸಿದ ಎರಡು ದಿನದ ನಂತರ ಮಂಗಳವಾರ ಪಕ್ಷದ ಅಧ್ಯಕ್ಷ ಎಂ.ಕೆ. ಸ್ಟಾಲಿನ್, ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಇಂದು ಡಿಎಂಕೆ ಪಕ್ಷದ ಕಚೇರಿಯಲ್ಲಿ ನಡೆದ ಹೊಸದಾಗಿ ಆಯ್ಕೆಯಾದ ಶಾಸಕರ ಸಭೆಯಲ್ಲಿ ಸ್ಟಾಲಿನ್ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಸ್ಟಾಲಿನ್ ಅವರು ಬುಧವಾರ ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಅವರನ್ನು ಭೇಟಿ ಮಾಡುತ್ತಿದ್ದು, ನೂತನ ಸರ್ಕಾರ ರಚಿಸುವ ಹಕ್ಕು ಮಂಡಿಸಲಿದ್ದಾರೆ. ಎಂ.ಕೆ. ಸ್ಟಾಲಿನ್ ಅವರು ತಾ. ೭ ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಐಪಿಎಲ್ ಮುಂದೂಡಿಕೆ-ವಿಶ್ವಕಪ್ ಟೂರ್ನಿ ಸ್ಥಳಾಂತರ

ನವದೆಹಲಿ, ಮೇ ೪: ಬಯೋ ಬಬಲ್‌ನಲ್ಲಿದ್ದರೂ ಆಟಗಾರರಿಗೆ ಕೊರೊನಾ ವಕ್ಕರಿಸಿದ್ದರಿಂದ ಐಪಿಎಲ್ ಟೂರ್ನಿಯನ್ನು ಅನಿರ್ದಿಷ್ಟಾವಧಿಗೆ ಅಮಾನತುಗೊಳಿಸಿದ ಬೆನ್ನಲ್ಲೇ ಭಾರತದಲ್ಲಿ ನಡೆಯಬೇಕಿದ್ದ ಟಿ-೨೦ ವಿಶ್ವಕಪ್ ಟೂರ್ನಿಯನ್ನು ಯುಎಇಗೆ ಸ್ಥಳಾಂತರಿಸಲು ಸಿದ್ಧತೆಗಳು ನಡೆಯುತ್ತಿವೆ ಎಂದು ಮೂಲಗಳು ತಿಳಿಸಿವೆ. ಈ ವರ್ಷದ ಟಿ-೨೦ ವಿಶ್ವಕಪ್ ಟೂರ್ನಿಯನ್ನು ಭಾರತದಿಂದ ಯುಎಇಗೆ ಸ್ಥಳಾಂತರಿಸಲು ಸಜ್ಜಾಗಿದ್ದು, ಭಾಗವಹಿಸುವ ಯಾವುದೇ ತಂಡಗಳಿಗೂ ಇಲ್ಲಿ ಆರಾಮದಾಯಕ ಆಗುವುದಿಲ್ಲ ಎಂದು ಬಿಸಿಸಿಐ ಒಪ್ಪಿಕೊಂಡAತೆ ಕಾಣುತ್ತಿದೆ. ಭಾರತದಲ್ಲಿ ನವೆಂಬರ್‌ನಲ್ಲಿ ಮೂರನೇ ಅಲೆ ಎದುರಾಗುವ ಸಾಧ್ಯತೆಗಳು ಹೆಚ್ಚಿರುವುದರಿಂದ ಪಂದ್ಯಾವಳಿ ಬಹುಶಃ ಯುಎಇಗೆ ಬದಲಾಗಲಿದ್ದು ಭಾರತವೇ ಟೂರ್ನಿಗೆ ಆತಿಥ್ಯ ವಹಿಸಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆಮ್ಲಜನಕ ಕೊರತೆ : ೪ ಮಂದಿ ಸಾವು

ಕಲಬುರಗಿ, ಮೇ ೪: ಚಾಮರಾಜನಗರದಲ್ಲಿ ಆಮ್ಲಜನಕ ಸರಿಯಾದ ಸಮಯಕ್ಕೆ ಸಿಕ್ಕದ ಕಾರಣ ೨೪ ಜನ ಸಾವನ್ನಪ್ಪಿರುವ ದುರ್ಘಟನೆ ಮರೆಯುವ ಮುನ್ನವೇ ಮತ್ತೊಂದು ಘಟನೆಯಲ್ಲಿ ಮಂಗಳವಾರ ಬೆಳಿಗ್ಗೆ ಕರ್ನಾಟಕದ ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲೂಕು ಆಸ್ಪತ್ರೆಯಲ್ಲಿ ೪ ಕೋವಿಡ್-೧೯ ರೋಗಿಗಳು ಆಮ್ಲಜನಕದ ಕೊರತೆಯಿಂದ ಸಾವನ್ನಪ್ಪಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಬೆಡ್‌ಗಳ ಕೊರತೆ ಇರುವುದರಿಂದ ರೋಗಿಗಳು ದಾಖಲಾದ ಖಾಸಗಿ ಆಸ್ಪತ್ರೆಗಳಲ್ಲಿ ಹೆಚ್ಚಿನ ಸಂಖ್ಯೆಯ ಸಾವು ಸಂಭವಿಸಿದೆ. ಅಧಿಕೃತ ಮೂಲಗಳ ಪ್ರಕಾರ, ಆಸ್ಪತ್ರೆಯಲ್ಲಿ ಆಮ್ಲಜನಕ ದಾಸ್ತಾನು ಇಲ್ಲದ ಕಾರಣ ಬೆಳಗಿನ ಜಾವ ೪.೩೦ರ ವೇಳೆಗೆ ಸಾವು ಸಂಭವಿಸಿದೆ.

ಸೇನಾ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತ

ಶ್ರೀನಗರ, ಮೇ ೪: ಕಣಿವೆ ರಾಜ್ಯ ಜಮು ಮತ್ತು ಕಾಶ್ಮೀರದಲ್ಲಿ ಉಗ್ರರ ಮೇಲೆ ಮುಗಿ ಬಿದ್ದ ಸೇನಾಪಡೆಗಳು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿವೆ. ಜಮು ಮತ್ತು ಕಾಶ್ಮೀರದ ಸೋಪೋರ್ ಜಿಲ್ಲೆಯ ನಾಥಿಪೋರಾ ಪ್ರದೇಶದಲ್ಲಿ ಈ ಎನ್‌ಕೌಂಟರ್ ನಡೆದಿದ್ದು, ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಕಳೆದ ತಿಂಗಳು ಇದೇ ಸೋಪೋರ್‌ನಲ್ಲಿ ಇಬ್ಬರು ಕೌನ್ಸಿಲರ್‌ಗಳು ಮತ್ತು ಓರ್ವ ಪೊಲೀಸ್ ಸಿಬ್ಬಂದಿಯನ್ನು ಉಗ್ರರು ಹತ್ಯೆಗೈದಿದ್ದರು. ದಾಳಿ ನಡೆಸಿದ್ದ ಉಗ್ರರ ಗುಂಪಿನಲ್ಲಿ ಓರ್ವ ವಿದೇಶ ಉಗ್ರ ಕೂಡ ಇದ್ದ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿದ್ದವು. ಇದೇ ಘಟನೆ ಕುರಿತಂತೆ ಕಾರ್ಯಾಚರಣೆಯಲ್ಲಿ ತೊಡಗಿದ್ದ ಭದ್ರತಾ ಪಡೆಗಳಿಗೆ ಉಗ್ರರ ಇರುವಿಕೆ ಕುರಿತು ಮಾಹಿತಿ ತಿಳಿದುಬಂದಿತ್ತು. ಈ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ್ದ ಸೇನಾಪಡೆಗಳು ಸೋಪೋರ್ ಜಿಲ್ಲೆಯ ನಾಥಿಪೋರಾ ಪ್ರದೇಶದಲ್ಲಿ ಎನ್‌ಕೌಂಟರ್ ನಡೆಸಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿವೆ.