ಮಡಿಕೇರಿ, ಮೇ ೪: ಕೊಡಗು ಜಿಲ್ಲೆಯಲ್ಲಿ ಮಂಗಳವಾರ ಬೆಳಿಗ್ಗೆ ೮ ಗಂಟೆ ವೇಳೆಗೆ ೬೫೮ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿದೆ. ೬೨೨ ಆರ್.ಟಿ.ಪಿ.ಸಿ.ಆರ್. ಮತ್ತು ೩೬ ಪ್ರಕರಣಗಳು ರ‍್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.ಮಡಿಕೇರಿ ತಾಲೂಕಿನಲ್ಲಿ ೨೨೭ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ. ಈ ಪೈಕಿ ೨೨೧ ಪ್ರಕರಣಗಳು ಆರ್.ಟಿ.ಪಿ.ಸಿ.ಆರ್. ಮತ್ತು ೬ ಪ್ರಕರಣಗಳು ರ‍್ಯಾಪಿಡ್ ಆಂಟಿಜೆನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.ಸೋಮವಾರಪೇಟೆ ತಾಲೂಕಿನಲ್ಲಿ ೩೨೧ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ. ಈ ಪೈಕಿ ೩೦೬ ಆರ್.ಟಿ.ಪಿ.ಸಿ.ಆರ್. ಮತ್ತು ೧೫ ಪ್ರಕರಣಗಳು ರ‍್ಯಾಪಿಡ್ ಆಂಟಿಜೆನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.ವೀರಾಜಪೇಟೆ ತಾಲೂಕಿನಲ್ಲಿ ೧೧೦ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ. ಈ ಪೈಕಿ ೯೫ ಆರ್.ಟಿ.ಪಿ.ಸಿ.ಆರ್ ಮತ್ತು ೧೫ ಪ್ರಕರಣಗಳು ರ‍್ಯಾಪಿಡ್ ಆಂಟಿಜೆನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೧೩,೧೩೨ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೫೭೬ ಮಂದಿ

(ಮೊದಲ ಪುಟದಿಂದ) ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೮೬೨೧ ಮಂದಿ ಗುಣಮುಖರಾಗಿದ್ದಾರೆ. ೪೩೭೮ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೮ ಮಂದಿ ಮೃತಪಟ್ಟಿದ್ದು, ಒಟ್ಟು ೧೩೩ ಮರಣ ಪ್ರಕರಣಗಳು ವರದಿಯಾಗಿದೆ. ಕಂಟೈನ್‌ಮೆAಟ್ ವಲಯಗಳ ಸಂಖ್ಯೆ ೪೮೪ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.