ಮಡಿಕೇರಿ, ಮೇ ೪: ಪೊಲೀಸ್ ಇಲಾಖೆಯಿಂದ ಕೊಡಗು ಜಿಲ್ಲಾ ಪೊಲೀಸ್ ಘಟಕಕ್ಕೆ ನೀಡಲಾಗಿರುವ ೭ ‘ತುರ್ತು ಸ್ಪಂದನಾ ವಾಹನ’ಗಳ ಸಂಚಾರಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ ಅವರು ಮಂಗಳವಾರ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ತುರ್ತು ಸ್ಪಂದನ ಸಹಾಯ ವ್ಯವಸ್ಥೆಯನ್ನು ಸಾರ್ವಜನಿಕರ ಅನುಕೂಲಕ್ಕೆ ತರಲಾಗಿದೆ. ಆ ದಿಸೆಯಲ್ಲಿ ದೇಶಾದ್ಯಂತ ಒಂದೇ ತುರ್ತು ಕರೆ ೧೧೨ ಸಂಖ್ಯೆಗೆ ಕರೆ ಮಾಡಿ ಯಾವುದೇ ರೀತಿಯ ಸಮಸ್ಯೆಗಳು ಎದುರಾದಲ್ಲಿ ಪರಿಹರಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.

ತುರ್ತು ಸ್ಪಂದನ ಸಹಾಯ ವ್ಯವಸ್ಥೆಯು ಇಆರ್‌ಎಸ್‌ಎಸ್ ೧೧೨ ಭಾರತ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾಗಿದೆ. ತುರ್ತು ಕರೆಗಳಾದ ೧೦೦(ಪೊಲೀಸ್), ೧೦೧ (ಅಗ್ನಿಶಾಮಕ ಮತ್ತು ತುರ್ತು ಸೇವೆ) ಹಾಗೂ ಇತರ ತುರ್ತು ಕರೆಗಳನ್ನು ೧೧೨ ರಲ್ಲಿ ಏಕೀಕೃತ ಗೊಳಿಸುವುದು ಇದರ ಉದ್ದೇಶವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದರು.

ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಸಾರ್ವಜನಿಕರು ಅಪಘಾತ, ಕೊಲೆ, ದರೋಡೆ, ಕಳ್ಳತನ, ಸುಲಿಗೆ, ಅಕ್ರಮ ಜೂಜಾಟ, ಮಹಿಳೆಯರು, ಮಕ್ಕಳು ಹಾಗೂ ಹಿರಿಯ ನಾಗರಿಕರ ರಕ್ಷಣೆ, ಪ್ರಾಕೃತಿಕ ವಿಪತ್ತು ಮತ್ತಿತರ ಸಂದರ್ಭಗಳಲ್ಲಿ ತುರ್ತು ಸೇವೆಗಳು ಅಗತ್ಯವಿದ್ದಲ್ಲಿ ೧೧೨ಕ್ಕೆ ದೂರವಾಣಿ ಕರೆ ಮಾಡಿ ಸೇವೆ ಪಡೆಯಬಹುದಾಗಿದೆ ಎಂದು ಕ್ಷಮಾ ಮಿಶ್ರಾ ವಿವರಿಸಿದರು.

ತುರ್ತು ಸ್ಪಂದನ ಸಹಾಯಕ ವ್ಯವಸ್ಥೆಯು ದೇಶಾದ್ಯಂತ ಒಂದೇ ತುರ್ತು ಕರೆ ೧೧೨, ರಾಜ್ಯದ್ಯಂತ ತುರ್ತು ಕರೆ ಸ್ವೀಕರಿಸಲು

(ಮೊದಲ ಪುಟದಿಂದ) ಬೆಂಗಳೂರಿನಲ್ಲಿ ವೈರ್‌ಲೆಸ್ ಕೇಂದ್ರ, ಕರೆ ೧೧೨, ಎಸ್‌ಎಂಎಸ್ ೧೧೨, ಇಮೇಲ್ eಡಿss೧೧೨ಞಣಞ@ಞsಠಿ.gov.iಟಿ, ವೆಬ್ ಪೋರ್ಟಲ್ hಣಣಠಿs://ಞಚಿ.ಟಿeಡಿs.iಟಿ, ೧೧೨ IಓಆIಂ ಂPP ವೆಬ್ ಪೋರ್ಟಲ್ ಸಾಮಾನ್ಯ ಮೊಬೈಲ್‌ನಲ್ಲಿ ೫ ಅಥವಾ ೯ ಸಂಖ್ಯೆಯನ್ನು ದೀರ್ಘವಾಗಿ ಒತ್ತುವ ಮೂಲಕ ಸೇವೆ ಪಡೆಯುವುದು ಇದರ ವೈಶಿಷ್ಟö್ಯವಾಗಿದೆ ಎಂದರು.

ಇನ್ನಷ್ಟು ಮಾಹಿತಿ: ಸ್ಮಾರ್ಟ್ ಮೊಬೈಲ್‌ನಲ್ಲಿ ಪವರ್ ಬಟನ್‌ನ್ನು ಐದು ಬಾರಿ ನಿರಂತರವಾಗಿ ಒತ್ತುವ ಮೂಲಕ ತುರ್ತು ವಿನಂತಿ ಕಳುಹಿಸಬಹುದಾಗಿದೆ. ಹಾಗೆಯೇ ಕರೆ ಮಾಡಿದವರ ಸ್ವಯಂಚಾಲಿತ ಸ್ಥಳ ಗುರುತಿಸುವಿಕೆಯೊಂದಿಗೆ ಹತ್ತಿರದ ತುರ್ತು ಸ್ಪಂದನ ವಾಹನದ ಸಿಬ್ಬಂದಿಗಳಿಗೆ ಸಂಪರ್ಕ ಸಾಧಿಸಲು ಸಹಾಯವಾಗುತ್ತದೆ.

ರಾಜ್ಯಾದ್ಯಂತ ತುರ್ತು ಕರೆ ಸ್ವೀಕರಿಸಲು ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ವೈರ್‌ಲೆಸ್ ಸ್ಥಾಪಿಸಲಾಗಿದೆ. ಸ್ವೀಕೃತಗೊಂಡ ಕರೆಗಳನ್ನು ಸಂಬAಧಿಸಿದ ಜಿಲ್ಲೆಗಳ ಸಂಯೋಜನಾ ಕೇಂದ್ರಕ್ಕೆ ರವಾನಿಸಿ ಹತ್ತಿರದ ತುರ್ತು ಸ್ಪಂದನ ವಾಹನಕ್ಕೆ ಮಾಹಿತಿ ನೀಡಿ ದೂರುದಾರರ ದೂರಿಗೆ ಸ್ಪಂದಿಸಲಿದ್ದಾರೆ.

ಡಿವೈಎಸ್‌ಪಿ ದಿನೇಶ್‌ಕುಮಾರ್, ಜಿಲ್ಲಾ ಪೊಲೀಸ್ ವಿಶೇಷ ವಿಭಾಗದ ಇನ್ಸ್ಪೆಕ್ಟರ್ ಮೇದಪ್ಪ, ರಿಸರ್ವ್ ಪೊಲೀಸ್ ಇನ್ಸ್ಪೆಕ್ಟರ್ ರಾಚಯ್ಯ, ನಗರ ಪೊಲೀಸ್ ಇನ್ಸ್ಪೆಕ್ಟರ್ ಅನೂಪ್ ಮಾದಪ್ಪ, ಗ್ರಾಮೀಣ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರವಿಕಿರಣ, ನಗರ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಅಂತಿಮ, ಪೊಲೀಸ್ ನಿಯಂತ್ರಣ ಕೊಠಡಿಯ ಪಿಎಸ್‌ಐ ಧನಂಜಯ ಇತರರು ಇದ್ದರು.