ಪೊನ್ನಂಪೇಟೆ, ಮೇ ೪: ದಕ್ಷಿಣ ಕೊಡಗಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಪೊನ್ನಂಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೊರೊನಾ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಪೊನ್ನಂಪೇಟೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಕೋವಿಡ್ ಟಾಸ್ಕ್ ಫೋರ್ಸ್ ಸಭೆ ನಡೆಸಲಾಯಿತು.

ಗ್ರಾ.ಪಂ. ಅಧ್ಯಕ್ಷೆ ಮೂಕಳೇರ ಸುಮಿತ ಗಣೇಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪುಟ್ಟರಾಜು ಮಾತನಾಡಿ, ಇತ್ತೀಚೆಗೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಪೊನ್ನಂಪೇಟೆ, ಮೇ ೪: ದಕ್ಷಿಣ ಕೊಡಗಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಪೊನ್ನಂಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೊರೊನಾ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಪೊನ್ನಂಪೇಟೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಕೋವಿಡ್ ಟಾಸ್ಕ್ ಫೋರ್ಸ್ ಸಭೆ ನಡೆಸಲಾಯಿತು.

ಗ್ರಾ.ಪಂ. ಅಧ್ಯಕ್ಷೆ ಮೂಕಳೇರ ಸುಮಿತ ಗಣೇಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪುಟ್ಟರಾಜು ಮಾತನಾಡಿ, ಇತ್ತೀಚೆಗೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಬೇಕಾದ ವಸ್ತು ತರಿಸಿಕೊಳ್ಳಬಹುದು ಎಂದರು.

ಕ್ವಾರAಟೈನ್‌ನಲ್ಲಿ ಇದ್ದರೂ ಕೂಡ ಕೆಲವರು ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿದ್ದು ಇಂಥವರು ಕಂಡುಬAದಲ್ಲಿ ಅವರಿಗೆ ದಂಡ ವಿಧಿಸಲಾಗುವುದು ಎಂದರು.

ಕೊರೊನಾ ಕಾರ್ಯಪಡೆ ತಂಡದಲ್ಲಿ ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು, ಕಂದಾಯ ಇಲಾಖೆ ಅಧಿಕಾರಿಗಳು, ಗ್ರಾ.ಪಂ. ಸದಸ್ಯರು, ಶಿಕ್ಷಕರು, ಆಶಾ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತರು, ಗ್ರಾ.ಪಂ. ಸಿಬ್ಬಂದಿ, ಪೌರಕಾರ್ಮಿಕರು ಇದ್ದು ಪೊಲೀಸ್ ಇಲಾಖೆಯ ಸಹಕಾರ ದೊಂದಿಗೆ ಕಾರ್ಯ ನಿರ್ವಹಿಸಲಾಗು ವುದು ಎಂದರು.

ಅಗತ್ಯ ವಸ್ತು ಖರೀದಿಯ ಸಂದರ್ಭ ಸಾರ್ವಜನಿಕರು ಕಡ್ಡಾಯ ವಾಗಿ ಮಾಸ್ಕ್ ಧರಿಸಿ, ಅಂತರ ಕಾಯ್ದುಕೊಂಡು ಸಹಕರಿಸುವಂತೆ ಮನವಿ ಮಾಡಿದರು.

ಸಭೆಯಲ್ಲಿ ಗ್ರಾ.ಪಂ. ಉಪಾಧ್ಯಕ್ಷರು ಸದಸ್ಯರು, ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯಕರ್ತರು, ಪೊಲೀಸ್ ಸಿಬ್ಬಂದಿ ಪಾಲ್ಗೊಂಡಿದ್ದರು.